ETV Bharat / state

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಂಚನೆ: ಕಾಂಗ್ರೆಸ್ ಮುಖಂಡ ಸೇರಿ ಐವರಿಗೆ 7 ವರ್ಷ ಶಿಕ್ಷೆ - ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯ

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ 5 ಕೋಟಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಕೆಬ್ಬಳ್ಳಿ ಆನಂದ್ ಸೇರಿದಂತೆ ಐದು ಮಂದಿಗೆ ತಲಾ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಪಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

CBI court
ಸಾಂದರ್ಭಿಕ ಚಿತ್ರ
author img

By

Published : Sep 10, 2022, 6:43 AM IST

ಬೆಂಗಳೂರು: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಂಚನೆ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯ ಕಾಂಗ್ರೆಸ್ ಮುಖಂಡ ಕೆಬ್ಬಳ್ಳಿ ಆನಂದ್ ಸೇರಿದಂತೆ ಐದು ಜನ ಆರೋಪಿಗಳಿಗೆ 7 ವರ್ಷ ಕಠಿಣ ಶಿಕ್ಷೆ ಮತ್ತು 5 ಕೋಟಿ ರೂ.ದಂಡ ವಿಧಿಸಿ ತೀರ್ಪು ನೀಡಿದೆ.

ಕಾಂಗ್ರೆಸ್ ಮುಖಂಡ ಕೆಬ್ಬಳ್ಳಿ ಆನಂದ್, ಹೆಚ್.ಎಸ್.ನಾಗಲಿಂಗಸ್ವಾಮಿ, ಚಂದ್ರಶೇಖರ್, ಮೂಡಾದ ಪ್ರಥಮ ದರ್ಜೆ ಸಹಾಯಕರಾಗಿದ್ದ ಹೆಚ್.ಕೆ.ನಾಗರಾಜ, ಕೆ.ಬಿ.ಹರ್ಷನ್‌ ಕಠಿಣ ಶಿಕ್ಷೆಗೆ ಒಳಗಾದ ಆಪಾದಿತರು. ಸಿಬಿಐ ನ್ಯಾಯಾಲಯ ಈ ಆಪಾದಿತರಿಗೆ ಕಠಿಣ ಶಿಕ್ಷೆ ಜೊತೆಗೆ ತಲಾ ಒಂದು ಕೋಟಿ ರೂ.ದಂಡ ವಿಧಿಸಿದೆ.

ಏನಿದು ಪ್ರಕರಣ?: ಅಪರಾಧಿಗಳು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 2013ರಲ್ಲಿ ತಲಾ ಒಂದು ಕೋಟಿ ರೂ. ಮೊತ್ತದ ವೋಚರ್ ಮತ್ತು ಚೆಕ್​​ಗಳನ್ನು ಮೋಸದಿಂದ ತುಂಬಿ ಮಂಡ್ಯದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಠೇವಣಿ ಇರಿಸಿದ್ದರು. ನಂತರ ಆ ಹಣವನ್ನು ಚಂದ್ರಶೇಖರ್ ಅವರಿಗೆ ಸೇರಿದ ಆಕಾಶ್ ಎಂಟರ್ ಪ್ರೈಸಸ್ ನ ಖಾತೆಗೆ ವರ್ಗಾಯಿಸಿಕೊಂಡು ಮೂಡಾಕ್ಕೆ ಹಣ ಮರಳಿಸದೆ ವಂಚನೆ ಎಸಗಿದ ಆರೋಪ ಎದುರಿಸುತ್ತಿದ್ದರು.

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಈ ಹಗರಣ ವಿಧಾನಸಭೆ ಅಧಿವೇಶನದಲ್ಲಿ ಸೇರಿದಂತೆ ಸಾರ್ವಜನಿಕವಾಗಿ ಬಹಳಷ್ಟು ಚರ್ಚೆಗೆ ಒಳಗಾಗಿದ್ದಾಗ ಆಗ ಮುಖ್ಯಮಂತ್ರಿಯಾಗಿದ್ದ ಈಗಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಪಕ್ರರಣವನ್ನು ಸಿಬಿಐ ತನಿಖೆಗೆ ವಹಿಸಿದ್ದರು.

ಕೇಂದ್ರೀಯ ತನಿಖಾ ದಳ ಈ ವಂಚನೆ ಪ್ರಕರಣದ ಬಗ್ಗೆ ತನಿಖೆ ನಡೆಸಿ ಮೂಡಾದ 5 ಕೋಟಿ ಹಣವನ್ನು ಪಡೆದು ಹಿಂತಿರುಗಿಸದೆ ವಂಚನೆ ಮಾಡಿದ ಆರೋಪದ ಮೇರೆಗೆ ಕಾಂಗ್ರೆಸ್ ಮುಖಂಡ ಕೆಬ್ಬಳ್ಳಿ ಆನಂದ್​ ಸೇರಿದಂತೆ ಒಟ್ಟು 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿತ್ತು.

ತನಿಖೆ ವೇಳೆ ತಪ್ಪಿತಸ್ಥರಲ್ಲದ 6 ಜನರನ್ನು ವಿಚಾರಣೆಯಿಂದ ಕೈಬಿಟ್ಟು 5 ಜನರ ವಿರುದ್ಧ ಅಂದಿನ ಸಿಬಿಐ ಡಿವೈಎಸ್​ಪಿ ಕೆ.ವೈ ಗುರುಪ್ರಸಾದ್ ನೇತೃತ್ವದ ತಂಡ ಆರೋಪಿಗಳ ವಿರುದ್ಧ 27.06.2015 ರಂದು ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಈ ಬಗ್ಗೆ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ.

ಆರೋಪಿಗಳ ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಗುರುವಾರ ತೀರ್ಪು ನೀಡಿ ಐದು ಮಂದಿ ಅಪರಾಧಿಗಳಿಗೆ ತಲಾ 7 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ತಲಾ ಒಂದೊಂದು ಕೋಟಿಯಂತೆ ಐದು ಕೋಟಿ ರೂ.ದಂಡವನ್ನು ಮೂಡಾಕ್ಕೆ ಪಾವತಿಸುವಂತೆ ಆದೇಶಿಸಿದ್ದಾರೆ.

ಇದನ್ನೂ ಓದಿ: ಉದ್ಯಮಿ ಆದಿಕೇಶವುಲು ಆಪ್ತನ ಅನುಮಾನಾಸ್ಪದ ಸಾವು: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.