ETV Bharat / state

ಅಕ್ರಮ ಗಣಿಗಾರಿಕೆಗೆ ಮಂಡ್ಯ ಜಿಲ್ಲಾಡಳಿತ ಬ್ರೇಕ್: ಡಿಸಿ ಕಚೇರಿ ಎದುರು ಜನರ ಪ್ರತಿಭಟನೆ - MP Sumalatha

ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸದಂತೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಹೀಗಾಗಿ ಈ ಗಣಿಗಾರಿಕೆಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದ ಹತ್ತಾರು ಗ್ರಾಮಗಳ ಗ್ರಾಮಸ್ಥರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸುವಂತೆ ಆಗ್ರಹಿಸಿದ್ದಾರೆ.

protest
ಡಿಸಿ ಕಚೇರಿ ಎದುರು ಪ್ರತಿಭಟನೆ
author img

By

Published : Aug 6, 2021, 9:15 AM IST

ಮಂಡ್ಯ: ಜಿಲ್ಲೆಯ ಅಕ್ರಮ ಕಲ್ಲು ಗಣಿಗಾರಿಕೆ ವಿಚಾರ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಒಂದು ಕಡೆ ಸಂಸದೆ ಸುಮಲತಾ ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕು ಎಂದು ಹೋರಾಟ ಆರಂಭಿಸಿದ್ದಾರೆ. ಮತ್ತೊಂದು ಕಡೆ ಮೈನಿಂಗ್ ನಂಬಿಕೊಂಡು ಜೀವನ ನಡೆಸುತ್ತಿದ್ದ ಸಾವಿರಾರು ಮಂದಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.

ಗಣಿಗಾರಿಕೆ ವಿರುದ್ಧ ಧ್ವನಿಯೆತ್ತಿದ ಸಂಸದೆ ಸುಮಲತಾ ತಮ್ಮ ಹೋರಾಟವನ್ನು ದೆಹಲಿ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಇನ್ನೊಂದೆಡೆ, ಮಂಡ್ಯ ಜಿಲ್ಲಾಡಳಿತ ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸದಂತೆ ಬ್ರೇಕ್ ಹಾಕಿದೆ. ಹೀಗಾಗಿ ಈ ಗಣಿಗಾರಿಕೆಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದ ಶ್ರೀರಂಗಪಟ್ಟಣ ತಾಲೂಕಿನ ಚನ್ನನಕೆರೆ, ಜಕ್ಕನಹಳ್ಳಿ ಹಾಗೂ ಶ್ರೀರಾಂಪುರ ಸೇರಿದಂತೆ ಹತ್ತಾರು ಗ್ರಾಮಗಳ ಗ್ರಾಮಸ್ಥರು ಮಂಡ್ಯದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸುವಂತೆ ಆಗ್ರಹಿಸಿದ್ದಾರೆ.

ಮಂಡ್ಯ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗ್ರಾಮಸ್ಥರು

ನಮ್ಮದು ಮಳೆಯಾಶ್ರಿತ ಪ್ರದೇಶವಾಗಿದ್ದು, ಕೃಷಿಯಿಂದ ಜೀವನ ನಡೆಸುವುದು ಕಷ್ಟ. ಹಾಗಾಗಿ ಗಣಿಗಾರಿಕೆಯನ್ನು ನಂಬಿಕೊಂಡಿದ್ದೇವೆ. ಅಲ್ಲಿ ಕಾರ್ಮಿಕರಾಗಿ ಲಾರಿ, ಟ್ರ್ಯಾಕ್ಟರ್ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದೇವೆ. ಈಗ ಗಣಿಗಾರಿಕೆ ನಿಂತಿರುವುದರಿಂದ ನಮ್ಮ ಬದುಕು ಬೀದಿಗೆ ಬಿದ್ದಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಗುತ್ತಿಗೆ ಪಡೆದಿರುವ ಡಿಬಿಎಲ್ ಕಂಪನಿಗೆ ಕಲ್ಲು ಗಣಿಗಾರಿಕೆ ನಡೆಸಲು ಅವಕಾಶ ನೀಡಲಾಗಿದೆ. ಆದರೆ ನಮಗೆ ಮಾತ್ರ ಅವಕಾಶ ಕೊಡುತ್ತಿಲ್ಲ. ಅವರಿಗೊಂದು ಕಾನೂನು, ನಮಗೊಂದು ಕಾನೂನು ಎಂದು ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.