ಮಂಡ್ಯ: ಜಿಲ್ಲೆಯ ಹಲವೆಡೆ ನಡೆಯುತ್ತಿದ್ದ ಅಕ್ರಮ ಕಲ್ಲು ಕ್ವಾರಿಗಳ ಮೇಲೆ ದಾಳಿ ನಡೆಸಿ ಅಕ್ರಮ ಸ್ಫೋಟಕ ವಸ್ತುಗಳನ್ನು ಜಪ್ತಿ ಮಾಡುವಲ್ಲಿ ಮಂಡ್ಯ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಶ್ರೀರಂಗಪಟ್ಟಣ ತಾಲೂಕಿನ ಚನ್ನನಕೆರೆ ಹಾಗೂ ನಾಗಮಂಗಲ ತಾಲೂಕಿನ ಕರಡೆಕೆರೆ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ಮಂಡ್ಯ ಎಸ್ಪಿ ಕೆ. ಪರಶುರಾಮ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.
ಓದಿ-ಎಫ್ಡಿಎ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಇಬ್ಬರು ಕಿಂಗ್ಪಿನ್ಗಳು ಅಂದರ್
ಕ್ವಾರಿಗಳಲ್ಲಿದ್ದ ಅಕ್ರಮ 150 ಜಿಲೆಟಿನ್ ಕಡ್ಡಿ, 2 ಮೆಗ್ಗಾರ್, 410 ಎಲೆಕ್ಟ್ರಿಕ್ ಡಿಟೋನೇಟರ್ಗಳು ಸೇರಿದಂತೆ ಸ್ಫೋಟಕ ಪೌಡರ್ ಜಪ್ತಿ ಮಾಡಿಡಲಾಗಿದೆ. ಅಲ್ಲದೆ, ಅಕ್ರಮವಾಗಿ ಸ್ಫೋಟಕ ಸಂಗ್ರಹಿಸಿದ್ದ ಆರೋಪದ ಮೇಲೆ ಕ್ವಾರಿ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
ಶಿವಮೊಗ್ಗ ಸ್ಫೋಟ ಪ್ರಕರಣದಿಂದ ಜಾಗೃತವಾಗಿರುವ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಅರೆಕೆರೆ ಹಾಗೂ ಬೆಳ್ಳೂರು ಪೊಲೀಸ್ ಠಾಣೆ ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.