ಮಂಡ್ಯ: ಬೈಕ್ ಮತ್ತು ಲಾರಿ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಕೆರೆಯ ಬಳಿ ಸಂಭವಿಸಿದೆ.
ಬೆಂಗಳೂರು ಕಡೆಯಿಂದ ಬಂದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಚನ್ನರಾಯಪಟ್ಟಣ ತಾಲೂಕಿನ ತೂಬಿನಕೆರೆ ಗ್ರಾಮದ ಮಂಜು ಅಲಿಯಾಸ್ ಭರತ ಸಾವಿಗೀಡಾದವರು ಎಂದು ತಿಳಿದುಬಂದಿದೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.