ETV Bharat / state

ಮಂಡ್ಯ: ಕೆ ಆರ್ ಎಸ್ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ನೀರಲ್ಲಿ ಮುಳುಗಿ ಸಾವು - ಮೃತದೇಹಕ್ಕಾಗಿ ಅಗ್ನಿ ಶಾಮಕ ದಳದಿಂದ ಶೋಧ

ಕೆ ಆರ್ ಎಸ್ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ಮುಳುಗಿ ಸಾವನ್ನಪ್ಪಿದ್ದಾರೆ.

KRS backwater
ಕೆ ಆರ್ ಎಸ್ ಹಿನ್ನೀರು
author img

By ETV Bharat Karnataka Team

Published : Nov 19, 2023, 6:23 PM IST

ಮಂಡ್ಯ: ಕೆ ಆರ್ ಎಸ್ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಮೂವರು ಮುಳುಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿಯ ವೇಣುಗೋಪಾಲ ಸ್ವಾಮಿ ದೇವಾಲಯದ ಬಳಿ ಇಂದು ನಡೆದಿದೆ. ಹರೀಶ್(32), ನಂಜುಂಡ, ಜ್ಯೋತಿ (18) ನೀರಿನಲ್ಲಿ ಮುಳುಗಿ ಮೃತಪಟ್ಟವರು. ಜ್ಯೋತಿ ಹಾಗೂ ನಂಜುಂಡ ಎಂಬುವರ ಶವ ಹೊರತೆಗೆಯಲಾಗಿದೆ. ಹರೀಶ್ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಮೈಸೂರಿನಿಂದ ಪ್ರವಾಸಕ್ಕೆಂದು ಎನ್‌ಜಿಒ ಕಡೆಯಿಂದ 20ಕ್ಕೂ ಹೆಚ್ಚು ಜನರು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಕೆಆರ್​ಎಸ್​ ಹಿನ್ನೀರಿನಲ್ಲಿ ಈಜುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಸದ್ಯ ಕೆ ಆರ್ ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತದೇಹಗಳನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಹರೀಶ್ ಮೃತದೇಹಕ್ಕಾಗಿ ಅಗ್ನಿ ಶಾಮಕ ದಳದಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಇದನ್ನೂ ಓದಿ:ಮದುವೆ ಮುಗಿಸಿ ಹಿಂತಿರುಗುವ ವೇಳೆ ಮರಕ್ಕೆ ಡಿಕ್ಕಿ ಹೊಡೆದ ಕಾರು; 6 ಮಂದಿ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.