ಮಂಡ್ಯ: ಜಿಲ್ಲೆಯಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಹೆಚ್ಚಳವಾಗುತ್ತಿದೆ. ಹೀಗಾಗಿ ನಗರಸಭೆಯವರು ವಾರ್ಡ್ಗಳು ಹಾಗೂ ಸಾರ್ವಜನಿಕ ಸ್ಥಳಗಳಿಗೆ ಸ್ಯಾನಿಟೈಸ್ ಮಾಡುತ್ತಿದ್ದಾರೆ.
ರಸ್ತೆಗಳು ಹಾಗೂ ಅಂಗಡಿ ಮುಂಗಟ್ಟುಗಳಿಗೆ ಸ್ಯಾನಿಟೈಸ್ ಮಾಡುತ್ತಿದ್ದಾರೆ. ಮಂಡ್ಯ ನಗರದ 11ನೇ ವಾರ್ಡ್ನಲ್ಲಿ ಹೋ ಐಸೋಲೇಷನ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚು ಜನಸಂದಣಿ ಸೇರುವ ಸ್ಥಳಗಳು, ಪಶ್ಚಿಮ ಠಾಣೆ ಸೇರಿದಂತೆ ರಸ್ತೆ ಪೂರ್ತಿ ಸ್ಯಾನಿಟೈಸ್ ಮಾಡಿದ್ದಾರೆ.
ಕಡ್ಡಾಯವಾಗಿ ಕೊರೊನಾ ನಿಯಮ ಪಾಲನೆ ಮಾಡಿ, ಭಯಪಡದೆ ಎಚ್ಚರಿಕೆ ವಹಿಸಿದ್ದು, ಎಲ್ಲರೂ ಮನೆಯಲ್ಲೇ ಇದ್ದು ಸಹಕರಿಸಿ. ಆದಷ್ಟು ಬೇಗ ಕೊರೊನಾ ನಿಯಂತ್ರಣ ಮಾಡೋಣ. ಕಡ್ಡಾಯವಾಗಿ ಮಾಸ್ಕ್ ಧರಿಸಿ ಮನೆಯಲ್ಲೇ ಇರಿ ಎಂದು ಪೊಲೀಸರು ಕೂಡ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಹಾಗೆಯೇ ವಿಕೆಂಡ್ ಕರ್ಫ್ಯೂ ಇದ್ದರೂ ಸಹ ಮನೆಯಿಂದ ಆಚೆ ಬಂದು ಕೊರೊನಾ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸಿಸುವ ಮೂಲಕ ಎಚ್ಚರಿಕೆ ನೀಡಿದ್ದಾರೆ.