ಮಂಡ್ಯ: ಮನೆಯಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ. ಮದ್ದೂರು ಪಟ್ಟಣದ ಮಹಿಳೆಯೊಬ್ಬರ ಕೈ-ಕಾಲು ಕಟ್ಟಿ ಅತ್ಯಾಚಾರ ಎಸಗಿದ ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮದ್ದೂರು ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದ್ದು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.