ಮಂಡ್ಯ: ಮೀನು ಸ್ವಚ್ಛ ಮಾಡಲು ಹೋಗಿ ಯುವಕನೋರ್ವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮದ್ದೂರು ತಾಲೂಕಿನ ಕೊತ್ತನಹಳ್ಳಿ ಗ್ರಾಮದ ಗುಳ್ಳೆಬೋರನ ಕೆರೆ ಬಳಿ ನಡೆದಿದೆ.
ಚಾಪುರದೊಡ್ಡಿ ಗ್ರಾಮದ ಮಹದೇವ (24) ಮೃತ ಯುವಕ. ಸ್ನೇಹಿತರ ಜೊತೆ ಮೀನುಗಳನ್ನು ಸ್ವಚ್ಛಗೊಳಿಸಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ಸಿಬ್ಬಂದಿ ಮೃತ ದೇಹದ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಈ ಘಟನೆ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.