ETV Bharat / state

ಮಂಗಳೂರಲ್ಲಿ ಬಾಂಬ್ ಪತ್ತೆ ಹಿನ್ನೆಲೆ ಕೆಆರ್​ಎಸ್​ನಲ್ಲಿ ಪೊಲೀಸ್​ ಭದ್ರತೆ ಹೆಚ್ಚಳ - ಮಂಗಳೂರಲ್ಲಿ ಬಾಂಬ್ ಪತ್ತೆ ಹಿನ್ನೆಲೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜನನಿಬಿಡ ಪ್ರದೇಶ ಸೇರಿದಂತೆ ಅತಿಸೂಕ್ಷ್ಮ ಸ್ಥಳಗಳಲ್ಲಿ ತಪಾಸಣೆ ನಡೆಸಿದ್ದಾರೆ.

ಕೆಆರ್​ಎಸ್​ಗೆ ಭದ್ರತೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ
police take action in KRS dam
author img

By

Published : Jan 20, 2020, 10:58 PM IST

Updated : Jan 21, 2020, 12:06 AM IST

ಮಂಡ್ಯ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಜನನಿಬಿಡ ಪ್ರದೇಶ ಸೇರಿದಂತೆ ಅತಿಸೂಕ್ಷ್ಮ ಸ್ಥಳಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ.

ಮಂಗಳೂರಲ್ಲಿ ಬಾಂಬ್ ಪತ್ತೆ ಹಿನ್ನೆಲೆ ಕೆಆರ್​ಎಸ್​ನಲ್ಲಿ ಪೊಲೀಸ್​ ಭದ್ರತೆ ಹೆಚ್ಚಳ

ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ಕೆಆರ್​ಎಸ್​ನಲ್ಲಿ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ ತಪಾಸಣೆ ಮಾಡಿ ಮುನ್ನೆಚ್ಚರಿಕೆ ವಹಿಸಿದ್ದು, ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಭದ್ರತೆಯಲ್ಲಿ ಕೆಆರ್​ಎಸ್​ಗೆ ಭದ್ರತೆ ಒದಗಿಸಲಾಗಿದೆ. ಸಿಬ್ಬಂದಿ ಪ್ರವಾಸಿಗರ ಮೇಲೆ ನಿಗಾ ಇಟ್ಟಿದ್ದಾರೆ.

ಕೆಆರ್​ಎಸ್​ನ ಪ್ರವಾಸಿಗರ ದ್ವಾರ, ಉತ್ತರ ಮತ್ತು ದಕ್ಷಿಣ ದ್ವಾರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿದ್ದು, ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ತಪಾಸಣೆ ಮಾಡಲಾಗಿದೆ. ಅನುಮಾನ ಬಂದ ಪ್ರವಾಸಿಗರನ್ನು ಪ್ರಶ್ನಿಸಿ ಒಳಗೆ ಬಿಡಲಾಗುತ್ತಿದೆ. ನಗರದ ರೈಲ್ವೆ ನಿಲ್ದಾಣದಲ್ಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

Intro:ಮಂಡ್ಯ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಹಿನ್ನೆಲೆ, ಜಿಲ್ಲಾ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಜನ ನಿಬಿಡ ಪ್ರದೇಶ ಸೇರಿದಂತೆ ಅತಿ ಸೂಕ್ಷ್ಮ ಪ್ರದೇಶದಲ್ಲಿ ತಪಾಸಣೆ ನಡೆಸಿದ್ದಾರೆ.
ಪ್ರಮುಖ ಪ್ರವಾಸಿ ತಾಣ ಕೆ.ಆರ್.ಎಸ್ ನಲ್ಲಿ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳಗಳ ಸಿಬ್ಬಂದಿ ತಪಾಸಣೆ ಮಾಡಿ ಮುನ್ನೆಚ್ಚರಿಕೆ ವಹಿಸಿದ್ದಾರೆ. ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಭದ್ರತೆಯಲ್ಲಿ ಕೆ.ಆರ್.ಎಸ್ ಗೆ ಭದ್ರತೆ ಒದಗಿಸಿದ್ದು, ಸಿಬ್ಬಂದಿ ಪ್ರವಾಸಿಗರ ಮೇಲೆ ನಿಗಾ ವಹಿಸಿದ್ದಾರೆ.
ಕೆ.ಆರ್.ಎಸ್ ನ ಪ್ರವಾಸಿಗರ ದ್ವಾರ, ಉತ್ತರ ಮತ್ತು ದಕ್ಷಿಣ ದ್ವಾರಗಳಲ್ಲಿ ಮೆಟಲ್ ಡಿಕೇಕ್ಟರ್ ಅಳವಡಿಸಲಾಗಿದೆ. ಕೆಲವು ಸೂಕ್ಷ್ಮಿ ಪ್ರದೇಶಗಳಲ್ಲಿ ತಪಾಸಣೆ ಮಾಡಲಾಗಿದೆ. ಅನುಮಾನ ಬಂದ ಪ್ರವಾಸಿಗರನ್ನು ಪ್ರಶ್ನೆ ಮಾಡಿ ಒಳಗೆ ಬಿಡಲಾಗುತ್ತಿದೆ.
ನಗರದ ರೈಲ್ವೆ ನಿಲ್ದಾಣದಲ್ಲೂ ಪೊಲೀಸರು ತಪಾಸಣೆ ನಡೆಸಿದರು. ಪ್ರಯಾಣಿಕರ ಬ್ಯಾಗ್ ಗಳನ್ನು ಚೆಕ್ ಮಾಡಿ ಭದ್ರತೆಯನ್ನು ಪರಿಶೀಲನೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಕಡೆ ಎಚ್ಚರಿಕೆ ವಹಿಸಲಾಗಿದೆ.
Body:ಯತೀಶ್ ಬಾಬು, ಈಟಿವಿ ಭಾರತ್, ಮಂಡ್ಯ.Conclusion:
Last Updated : Jan 21, 2020, 12:06 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.