ಮಂಡ್ಯ: ಪ್ರತಿ ವರ್ಷದ ರೀತಿ ಈ ಬಾರಿಯೂ ಸಹ ಮೂಡಲ ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಪುನರ್ ಪ್ರತಿಷ್ಠಾಪನೆಗೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆಯಿಂದ ಇಂದು ಬೃಹತ್ ಸಂಕೀರ್ತನಾ ಯಾತ್ರೆ ಜರುಗಿತು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಸದ್ಯ ಹೈಕೋರ್ಟ್ ಅಂಗಳದಲ್ಲಿದೆ.
ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನದಿಂದ ರಂಗನಾಥಸ್ವಾಮಿ ದೇವಸ್ಥಾನದವರೆಗೆ ಸಂಕೀರ್ತನಾ ಯಾತ್ರೆಯ ಮೆರವಣಿಗೆ ನಡೆಯಿತು. ಶ್ರೀರಂಗಪಟ್ಟಣದಲ್ಲಿ ಯಾತ್ರೆ ಇರುವ ಕಾರಣ ಇಡೀ ಪಟ್ಟಣದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಮಂಡ್ಯ ಎಸ್ಪಿ ಯತೀಶ್ ನೇತೃತ್ವದಲ್ಲಿ 7 ಮಂದಿ ಡಿವೈಎಸ್‍ಪಿ, 15 ಮಂದಿ ಸಿಪಿಐ, 9 ಡಿಎಆರ್ ಹಾಗೂ 6 ಕೆಎಸ್ಆರ್ಪಿ ತುಕಡಿ ಸೇರಿದಂತೆ 1,500 ಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದಲ್ಲದೇ ಎರಡು ಡ್ರೋಣ್ ಕ್ಯಾಮೆರಾ, 20 ಮೂವಿಂಗ್ ಕ್ಯಾಮೆರಾ ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಹಾಕಲಾಗಿದೆ.
ಇದನ್ನೂ ಓದಿ: ಕಟೀಲು ಶ್ರೀದುರ್ಗಾಪರಮೇಶ್ವರಿ ದೇಗುಲಕ್ಕೆ ನಟ ಸುದೀಪ್ ದಂಪತಿ ಭೇಟಿ, ಪೂಜೆ ಸಲ್ಲಿಕೆ