ETV Bharat / state

ಅದ್ಧೂರಿಯಾಗಿ ನೆರವೇರಿದ ಮೇಲುಕೋಟೆ ಚೆಲುವನಾರಾಯಣ ವೈರಮುಡಿ ಬ್ರಹ್ಮೋತ್ಸವ - ಚೆಲುವನಾರಾಯಣಸ್ವಾಮಿ ವೈರಮುಡಿ ಉತ್ಸವ

ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರದಲ್ಲಿ ಚೆಲುವನಾರಾಯಣಸ್ವಾಮಿಯ ವೈರಮುಡಿ ಉತ್ಸವ ವೈಭವದಿಂದ ಜರುಗಿತು.

vayramudi utshava
ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ
author img

By

Published : Apr 2, 2023, 10:36 AM IST

Updated : Apr 2, 2023, 10:52 AM IST

ಮೇಲುಕೋಟೆ ಚೆಲುವನಾರಾಯಣ ವೈರಮುಡಿ ಬ್ರಹ್ಮೋತ್ಸವ ಸಂದರ್ಭದ ದೃಶ್ಯಗಳು

ಮಂಡ್ಯ: ವಿಶ್ವವಿಖ್ಯಾತ, ಐತಿಹಾಸಿಕ ಮೇಲುಕೋಟೆ ಕ್ಷೇತ್ರದ ಚೆಲುವನಾರಾಯಣಸ್ವಾಮಿಯ ವೈರಮುಡಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ವಜ್ರಖಚಿತ ವೈರಮುಡಿ ಧರಿಸಿದ್ದ ಚೆಲುವನಾರಾಯಣಸ್ವಾಮಿಯನ್ನು ಕಣ್ತುಂಬಿಕೊಂಡ ಭಕ್ತರು ‘ಗೋವಿಂದ, ಗೋವಿಂದ’ ಎಂಬ ಜಯಘೋಷಗಳನ್ನು ಮೊಳಗಿಸಿದರು. ಗಂಡ-ಭೇರುಂಡ ಸ್ವರೂಪಿ ಚಂದ್ರಪ್ರಭೆ ಪ್ರಭಾವಳಿಯ ಮಧ್ಯದಲ್ಲಿ ಅಲಂಕಾರ ಸ್ವರೂಪಿಯಾಗಿದ್ದ ಸ್ವಾಮಿಯ ಉತ್ಸವ ದೇವಾಲಯದ ಹೊರ ಬರುತ್ತಿದ್ದಂತೆ ಭಕ್ತರು ಸಂಭ್ರಮಿಸಿದರು.

ರಾಮಾನುಜಾಚಾರ್ಯರ ಸನ್ನಿಧಿಯಲ್ಲಿ ಪ್ರಥಮ ಪೂಜೆ ಸಲ್ಲಿಸಿದ ನಂತರ ರಾತ್ರಿ 8.30ಕ್ಕೆ ವೈರಮುಡಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಉತ್ಸವ ಸಾಗುವ ರಾಜಬೀದಿಯನ್ನು ತಳಿರು-ತೋರಣ, ದೀಪಾಲಂಕಾರದಿಂದ ಶೃಂಗರಿಸಲಾಗಿತ್ತು. ಬೀದಿಯ ಎರಡೂ ಬದಿಯಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದರು. ರಾಜ್ಯ ಮಾತ್ರವಲ್ಲದೇ ಪಕ್ಕದ ತಮಿಳುನಾಡು, ಆಂಧ್ರ ಪ್ರದೇಶ, ಕೇರಳದಿಂದಲೂ ಭಕ್ತರು ಬಂದಿದ್ದರು. ಮೇಲುಕೋಟೆಯ ವಸತಿ ಗೃಹಗಳು, ಛತ್ರಗಳು ಭಕ್ತರಿಂದ ಕಿಕ್ಕಿರಿದು ತುಂಬಿದ್ದವು.

ಇದನ್ನೂ ಓದಿ: ರಾಜಘಟ್ಟ ಆಂಜನೇಯ ಸ್ವಾಮಿ ಜಾತ್ರೆ: ಬೃಹತ್ ಕೊಪ್ಪರಿಗೆಯಲ್ಲಿ 2 ಸಾವಿರ ಮುದ್ದೆ ತಯಾರಿ!

ಇದಕ್ಕೂ ಮುನ್ನ, ಮಂಡ್ಯದ ಜಿಲ್ಲಾ ಖಜಾನೆ ಕಚೇರಿಯಲ್ಲಿದ್ದ ವೈರಮುಡಿ ಹಾಗೂ ರಾಜಮುಡಿ ತಿರುವಾಭರಣ ಪೆಟ್ಟಿಗೆಗೆ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ.ಎಚ್‌.ಎನ್‌.ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ್‌ ಅವರು ಪೂಜೆ ಸಲ್ಲಿಸುವ ಮೂಲಕ ಹೊರತೆಗೆದರು. ನಂತರ ಮಂಡ್ಯದ ಲಕ್ಷ್ಮೀ ಜನಾರ್ಧನ ದೇವಾಲಯದಲ್ಲಿ ಆಭರಣ ಪೆಟ್ಟಿಗೆಗೆ ಪೂಜೆ ನೆರವೇರಿತು. ವಿಶೇಷ ವಾಹನದಲ್ಲಿ ಪೊಲೀಸ್‌ ಭದ್ರತೆಯೊಂದಿಗೆ ಮೇಲುಕೋಟೆಗೆ ಮೆರವಣಿಗೆ ಮೂಲಕ ಆಭರಣಗಳನ್ನು ಕೊಂಡೊಯ್ಯಲಾಯಿತು.

ನಂತರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಆಭರಣ ಪೆಟ್ಟಿಗೆ ತೆರೆಯಲಾಯಿತು. ದೇವಾಲಯದ ಸ್ಥಾನಿಕರು ಆಭರಣ ಜೋಡಣೆ (ಪರ್ಕಾವಣೆ) ಪೂರ್ಣಗೊಳಿಸಿ ಕಿರೀಟ ಸಿದ್ಧಗೊಳಿಸಿದರು. ಮಹಾಮಂಗಳಾರತಿಯೊಂದಿಗೆ ಚೆಲುವನಾರಾಯಣ ಉತ್ಸವ ಮೂರ್ತಿಯನ್ನು ಮುಡಿಗೇರಿಸಲಾಯಿತು. ಉತ್ಸವ ಇಂದು ಬೆಳಿಗ್ಗೆ 3 ಗಂಟೆಯವರೆಗೂ ನಡೆಯಿತು.

ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ದಂಪತಿ, ಸೂರಜ್ ರೇವಣ್ಣ ಸೇರಿದಂತೆ ಗಣ್ಯರಿದ್ದರು.

ಇದನ್ನೂ ಓದಿ: ಬಿಜೆಪಿ ಅಭಿಪ್ರಾಯ ಸಂಗ್ರಹ ಸಭೆ: ಹಾವೇರಿ, ಬೆಳಗಾವಿ ಕ್ಷೇತ್ರಗಳ ಬಗ್ಗೆ ಮಹತ್ವದ ಚರ್ಚೆ

Last Updated : Apr 2, 2023, 10:52 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.