ETV Bharat / state

ಉರಿಗೌಡ ನಂಜೇಗೌಡ ಸಿನಿಮಾಕ್ಕೆ ಬ್ರೇಕ್; ಶ್ರೀಗಳ ಭೇಟಿ ಬಳಿಕ ಯೂಟರ್ನ್ ಹೊಡೆದ ಸಚಿವ ಮುನಿರತ್ನ - ಡಾ ಸಿ ಎನ್ ಅಶ್ವತ್ಥ್​ ನಾರಾಯಣ್

ಉರಿಗೌಡ ಹಾಗೂ ನಂಜೇಗೌಡರ ವಿಚಾರವಾಗಿ ಸೂಕ್ತವಾದ ದಾಖಲೆಗಳು ಹಾಗೂ ಶಾಸನಗಳು ಕಂಡುಬಂದರೆ ಅದನ್ನು ಸಂಸ್ಥಾನಕ್ಕೆ ತನ್ನಿ, ಬಳಿಕ ಪರಾಮರ್ಶಿಸೋಣ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿಗಳಾಗಿರುವ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ಮಾಡಿದ ಸಚಿವ ಮುನಿರತ್ನ

author img

By

Published : Mar 20, 2023, 4:19 PM IST

Updated : Mar 20, 2023, 9:07 PM IST

ಸಚಿವ ಮುನಿರತ್ನ ಮಾತನಾಡಿದರು

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿರುವ ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್​ ಬಿದ್ದಿದೆ. ನಿರ್ಮಲಾನಂದ ಸ್ವಾಮೀಜಿಯವರ ಭೇಟಿ ಬಳಿಕ ಇದ್ದಕ್ಕಿದ್ದಂತೆ ಮುನಿರತ್ನ ಯೂಟರ್ನ್ ಹೊಡೆದಿದ್ದು, ಉರಿಗೌಡ ನಂಜೇಗೌಡ ಚಿತ್ರದ ಚಿತ್ರೀಕರಣ ನಿರ್ಮಾಣ ಮಾಡಲ್ಲ, ಜೊತೆಗೆ ಈ ಕುರಿತು ಚರ್ಚೆ ಸಹ ನಡೆಸಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಈ ಮೂಲಕ ಉರಿಗೌಡ-ನಂಜೇಗೌಡ ವಿವಾದಿತ ಚಲನಚಿತ್ರ ಗೊಂದಲಗಳಿಗೆ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ತೆರೆ ಎಳೆದಿದ್ದಾರೆ. ಇದೀಗ ಮುನಿರತ್ನ ಅವರು ಮಂಡ್ಯದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಚರ್ಚಿಸಿದ್ದು, ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿನಿಮಾ ಚಿತ್ರೀಕರಣ ಇಲ್ಲ ಎಂದು ಹೇಳಿದರು.

ನಿರ್ಮಾಲನಾಂದ ಸ್ವಾಮೀಜಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ, ಉರಿಗೌಡ- ನಂಜೇಗೌಡ ಸಿನಿಮಾ ಮಾಡುವುದನ್ನು ಕೈ ಬಿಡುವಂತೆ ಸ್ವಾಮೀಜಿ ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿಯ ಮಾತಿನಂತೆ ಸಿನಿಮಾ ನಿರ್ಮಾಣ ಮಾಡದಿರಲು ಮುನಿರತ್ನ ಘೋಷಣೆ ಮಾಡಿದರು.

ಅವರಿಬ್ಬರ ಬಗ್ಗೆ ಸಂಶೋಧನೆ ನಡೆಯುತ್ತಿದೆ: ಉರಿಗೌಡ, ನಂಜೇಗೌಡ ಚಿತ್ರ ನಿರ್ಮಾಣದ ಆಲೋಚನೆ ಇರಲಿಲ್ಲ. ಆದ್ರೆ, ಹೆಚ್​ಡಿ ಕುಮಾರಸ್ವಾಮಿ ಹೇಳಿದ ಬಳಿಕ ಚಿತ್ರ ನಿರ್ಮಾಣಕ್ಕೆ ನಿರ್ಧಾರ ಮಾಡಿದ್ದೆ. ದೊಡ್ಡ ಮಟ್ಟದಲ್ಲಿ ಸಿನಿಮಾ ಮಾಡಬೇಕೆಂದು ಯೋಚನೆ ಮಾಡಿದ್ದೆ. ಆದ್ರೆ, ಇದೀಗ ಈ ಚಿತ್ರ ನಿರ್ಮಾಣ ಮಾಡಲ್ಲ ಎಂದು ನಾನು ಶ್ರೀಗಳಿಗೆ ತಿಳಿಸಿದ್ದೇನೆ. ನಾನೊಬ್ಬ ನಿರ್ಮಾಪಕನಾಗಿ ಈ ಚಿತ್ರ ಮಾಡುತ್ತೇನೆ ಎಂದು ಹೇಳಿದ್ದೆ. ಎಲ್ಲವೂ ಸತ್ಯ ಘಟನೆ ಎಂದು ಸಿನಿಮಾ ಮಾಡಲು ಆಗಲ್ಲ. ಉರಿಗೌಡ, ದೊಡ್ಡ ನಂಜೇಗೌಡ ಬಗ್ಗೆ ಸಂಶೋಧನೆ ನಡೆಯುತ್ತಿದೆ ಎಂದು ಹೇಳಿದರು.

ನಿಗದಿಯಾಗಿದ್ದ ಮುಹೂರ್ತ.. ಟೈಟಲ್ ರಿಜಿಸ್ಟರ್​ಗೆ ಅರ್ಜಿ ಹಾಕಿದ್ದರು. ಅಲ್ಲದೇ ಸಿನಿಮಾದ ಮುಹೂರ್ತ ದಿನಾಂಕವನ್ನೂ ಘೋಷಿಸಿದ್ದರು. ಸಾಮಾಜಿಕ ಜಾಲತಾಣ ಖಾತೆಯಲ್ಲಿ ಸಿನಿಮಾದ ಪೋಸ್ಟರ್ ಹಂಚಿಕೊಂಡಿರುವ ಮುನಿರತ್ನ, ಮೇ 18 ರಂದು ಉರಿಗೌಡ-ನಂಜೇಗೌಡ ಸಿನಿಮಾ ಮುಹೂರ್ತ ಮಾಡಲಾಗುವುದು ಎಂದಿದ್ದರು. ವೃಷಬಾದ್ರಿ ಪ್ರೊಡಕ್ಷನ್ ನಿರ್ಮಾಣದ ಐತಿಹಾಸಿಕ ಸತ್ಯ ಘಟನೆಗಳ ಆಧಾರಿತ ‘ಉರಿಗೌಡ ನಂಜೇಗೌಡ’ ಚಿತ್ರದ ಮುಹೂರ್ತ ಮೇ 18ರಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ ಎಂದಿದ್ದರು.

ಡಾ ಸಿ ಎನ್ ಅಶ್ವತ್ಥನಾರಾಯಣ್ ಚಿತ್ರಕಥೆ ಇರುವ ಈ ಚಿತ್ರವನ್ನು ಆರ್. ಎಸ್ ಗೌಡ ನಿರ್ದೇಶನ ಮಾಡುತ್ತಿದ್ದಾರೆ ಎಂದು ಸಚಿವ ಮುನಿರತ್ನ ಅವರು ಟ್ವೀಟ್‌ ಮೂಲಕ ತಿಳಿಸಿದ್ದರು. ಉರಿಗೌಡ ನಂಜೇಗೌಡ ಟೈಟಲ್​ಗೆ ಅರ್ಜಿ ಸಲ್ಲಿಸಿದ್ದರ ವಿರುದ್ಧ ಈಗಾಗಲೇ ಆಕ್ಷೇಪ ವ್ಯಕ್ತವಾಗಿದ್ದವು. ಒಕ್ಕಲಿಗ ಯುವಬ್ರಿಗೆಡ್ ಹಾಗೂ ಅನಿವಾಸಿ ಭಾರತೀಯ ಒಕ್ಕಲಿಗ ಯುವಬ್ರಿಗೆಡ್ ವಿರೋಧಿಸಿತ್ತು. ಅಲ್ಲದೇ ಇದಕ್ಕೆ ಅನುಮತಿ ನೀಡಬಾರದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಿತ್ತು. ವೃಷಭಾದ್ರಿ ಪ್ರೊಡಕ್ಷನ್ಸ್ ಅವರು ಉರಿಗೌಡ, ನಂಜೇಗೌಡ ಚಲನಚಿತ್ರ ನಿರ್ಮಿಸಲು ವಾಣಿಜ್ಯ ಮಂಡಳಿಗೆ ಮನವಿಯನ್ನು ಸಲ್ಲಿಸಿರುತ್ತಾರೆ.

ಸ್ವಾಮೀಜಿ ಹೇಳಿದ್ದೇನು?: ಟಿಪ್ಪು ಸುಲ್ತಾನನನ್ನು ಕೊಂದಿದ್ದು ಉರಿ ಗೌಡ ಮತ್ತು ನಂಜೇಗೌಡರೆಂಬ ಒಕ್ಕಲಿಗ ಯೋಧರು ಎಂಬ ಬಿಜೆಪಿ ನಾಯಕರ ಪ್ರಚಾರಕ್ಕೆ ಹಿನ್ನಡೆಯುಂಟಾಗಿದೆ. ಇಂಥ ಕಾಲ್ಪನಿಕವಾದ, ಇದುವರೆಗೆ ಯಾವುದೇ ದಾಖಲೆಗಳು ಸಿಗದ ವಾದವನ್ನು ಮುಂದಿಟ್ಟುಕೊಂಡು ಒಕ್ಕಲಿಗ ಯೋಧರ ಹೆಸರಿನಲ್ಲಿ ರಾಜಕೀಯ ಮಾಡಬಾರದು ಎಂಬ ಸ್ಪಷ್ಟ ಸಂದೇಶವನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿಗಳಾಗಿರುವ ಶ್ರೀ ನಿರ್ಮಲಾನಂದನಾಥ ಸ್ವಾಮಿ ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿದರು

ಕಳೆದ ಕೆಲವು ದಿನಗಳಿಂದ ಉರಿಗೌಡ, ನಂಜೇಗೌಡರ ವಿಚಾರಗಳು ದೊಡ್ಡ ಮಟ್ಟದಲ್ಲಿ ಚರ್ಚೆಯಲ್ಲಿವೆ. ಅದರ ನಡುವೆ ಸಚಿವ ಮುನಿರತ್ನ ಅವರು ಈ ಕುರಿತು ಸಿನಿಮಾ ಮಾಡುವುದಾಗಿ ಘೋಷಣೆ ಮಾಡಿದ್ದರು. ಈ ಹಂತದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಅವರು ಮಧ್ಯ ಪ್ರವೇಶ ಮಾಡಿದ್ದಾರೆ. ಮುನಿರತ್ನ ಅವರನ್ನು ಕರೆಸಿಕೊಂಡು ಈ ರೀತಿ ಸಿನಿಮಾ ಮಾಡುವುದು ಬೇಡ ಎಂಬ ಸಂದೇಶವನ್ನು ನೀಡಿದ್ದಾರೆ ಮತ್ತು ಅವರ ಮಾತಿನಂತೆ ಸಿನಿಮಾ ನಿರ್ಮಾಣವನ್ನು ಕೈಬಿಟ್ಟಿರುವುದಾಗಿ ಮುನಿರತ್ನ ಅವರೂ ಘೋಷಣೆ ಮಾಡಿದ್ದಾರೆ.

ಈ ನಡುವೆ, ನಿರ್ಮಲಾನಂದನಾಥ ಸ್ವಾಮೀಜಿಯವರು ಈ ವಿಚಾರದಲ್ಲಿ ಯಾರೆಲ್ಲ ಮಾತನಾಡುತ್ತಿದ್ದಾರೋ ಅವರೆಲ್ಲ ಕೂಡಲೇ ಸುಮ್ಮನಾಗಬೇಕು ಎಂದು ಫರ್ಮಾನು ಹೊರಡಿಸಿದ್ದಾರೆ. ಈಗ ನಡೆಯುತ್ತಿರುವ ಯಾವ ಚರ್ಚೆಯಲ್ಲೂ ಹುರುಳಿಲ್ಲ ಎಂದಿರುವ ಸ್ವಾಮೀಜಿ, ಒಂದು ವೇಳೆ ಸೂಕ್ತವಾದ ಶಾಸನ ದಾಖಲೆಗಳು ಕಂಡುಬಂದರೆ ಅದನ್ನು ಸಂಸ್ಥಾನಕ್ಕೆ ತನ್ನಿ, ಬಳಿಕ ಪರಾಮರ್ಶಿಸೋಣ ಎಂದಿದ್ದಾರೆ.

ಇದನ್ನೂ ಓದಿ : ಉರಿಗೌಡ-ನಂಜೇಗೌಡ ಚಿತ್ರ ನಿರ್ಮಾಣದಿಂದ ಸಚಿವ ಮುನಿರತ್ನ ಯು-ಟರ್ನ್!

Last Updated : Mar 20, 2023, 9:07 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.