ಮಂಡ್ಯ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪುವಿನ ರೀತಿ ಹೊಡೆದು ಹಾಕಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಸಚಿವ ಅಶ್ವತ್ಥನಾರಾಯಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ದಿನಗಳಿಂದ ಟಿಪ್ಪು ಮತ್ತು ಸಾವರ್ಕರ್ ವಿಚಾರ ಸುದ್ದಿಯಲ್ಲಿದೆ. ಈ ವೇಳೆ ಟಿಪ್ಪು ಬಗ್ಗೆ ಕಾಂಗ್ರೆಸ್ನವರು ಒಂದು ಹೇಳಿಕೆ ನೀಡಿದ್ರೆ, ಮತ್ತೊಂದೆಡೆ ಟಿಪ್ಪುವನ್ನು ವಿರೋಧಿಸುತ್ತಾ ಬಿಜೆಪಿಯವರು ಸಾವರ್ಕರ್ ಸಾಧನೆ ಬಗ್ಗೆ ತಿಳಿಸುತ್ತಿದ್ದಾರೆ.
ಇದೀಗ ಮತ್ತೆ ಟಿಪ್ಪು ವಿಚಾರ ಇಟ್ಟುಕೊಂಡೇ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಸಚಿವ ಅಶ್ವತ್ಥನಾರಾಯಣ್ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದ ಸಾತನೂರು ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುವ ಭರದಲ್ಲಿ, ಟಿಪ್ಪುವಿನ ಜಾಗಕ್ಕೆ ಸಿದ್ದರಾಮಯ್ಯರವರು ಬಂದು ಬಿಡುತ್ತಾರೆ. ನಿಮಗೆ ಸಾವರ್ಕರ್ ಬೇಕಾ, ಟಿಪ್ಪು ಬೇಕಾ? ಎಂಬುದನ್ನು ನೀವೇ ತೀರ್ಮಾನಿಸಿ. ಹುರಿಗೌಡ ನಂಜೇಗೌಡ ಅವರು ಟಿಪ್ಪುವಿಗೆ ಏನು ಮಾಡಿದ್ರು ಅನ್ನೋದು ನಿಮಗೆ ಗೊತ್ತಿದೆ. ಅದೇ ರೀತಿ ಇವರನ್ನು ಹೊಡೆದು ಹಾಕಬೇಕು. ರಾಜ್ಯದಲ್ಲಿ ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂದಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಸಂಪುಟದಿಂದ ತಕ್ಷಣ ಅಶ್ವತ್ಥನಾರಾಯಣ್ ವಜಾಗೊಳಿಸಿ.. ಸಚಿವ ಅಶ್ವತ್ಥನಾರಾಯಣ್ ಅವರ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೆಂಡಾಮಂಡಲವಾಗಿದ್ದಾರೆ. ಈ ಕುರಿತು ಸರಣಿ ಟ್ವಿಟ್ ಮಾಡಿರುವ ಅವರು, ಸಚಿವ ಡಾ. ಅಶ್ವತ್ಥನಾರಾಯಣ ಅವರು ಮಾನಸಿಕ ಅಸ್ವಸ್ಥರ ರೀತಿ ಹೇಳಿಕೆ ನೀಡಿದ್ದು, ತಕ್ಷಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕು. ಇಲ್ಲದಿದ್ದರೆ ಅಶ್ವತ್ಥನಾರಾಯಣ್ ಮಾನಸಿಕ ಅಸ್ವಸ್ಥರೇ ಎಂಬುದನ್ನು ಭಾರತೀಯ ಜನತಾ ಪಕ್ಷ ಒಪ್ಪಿಕೊಂಡಂತಾಗುತ್ತದೆ ಎಂದು ಹೇಳಿದ್ದಾರೆ.
-
ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ. 3/4
— Siddaramaiah (@siddaramaiah) February 15, 2023 " class="align-text-top noRightClick twitterSection" data="
">ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ. 3/4
— Siddaramaiah (@siddaramaiah) February 15, 2023ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ. 3/4
— Siddaramaiah (@siddaramaiah) February 15, 2023
ಸಚಿವ @drashwathcn ಅವರು ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ @BSBommai ಮತ್ತು ಪ್ರಧಾನ ಮಂತ್ರಿ @narendramodi ಅವರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಮೌನ ಸಮ್ಮತಿಯ ಲಕ್ಷಣವೇ? ಎಂದು ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಪ್ರಶ್ನಿಸಿದ್ದಾರೆ.
-
ಟಿಪ್ಪುವನ್ನು ಹೊಡೆದುಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ @drashwathcn ಜನರಿಗೆ ಕರೆನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ. 1/4
— Siddaramaiah (@siddaramaiah) February 15, 2023 " class="align-text-top noRightClick twitterSection" data="
">ಟಿಪ್ಪುವನ್ನು ಹೊಡೆದುಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ @drashwathcn ಜನರಿಗೆ ಕರೆನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ. 1/4
— Siddaramaiah (@siddaramaiah) February 15, 2023ಟಿಪ್ಪುವನ್ನು ಹೊಡೆದುಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ @drashwathcn ಜನರಿಗೆ ಕರೆನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ. 1/4
— Siddaramaiah (@siddaramaiah) February 15, 2023
ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ.. ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ. ಟಿಪ್ಪುವನ್ನು ಹೊಡೆದು ಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ @drashwathcn ಜನರಿಗೆ ಕರೆ ನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ. ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
-
ನನ್ನ ಹತ್ಯೆಗೆ @drashwathcn ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ? 2/4
— Siddaramaiah (@siddaramaiah) February 15, 2023 " class="align-text-top noRightClick twitterSection" data="
">ನನ್ನ ಹತ್ಯೆಗೆ @drashwathcn ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ? 2/4
— Siddaramaiah (@siddaramaiah) February 15, 2023ನನ್ನ ಹತ್ಯೆಗೆ @drashwathcn ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ? 2/4
— Siddaramaiah (@siddaramaiah) February 15, 2023
ನನ್ನ ಹತ್ಯೆಗೆ @drashwathcn ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ?
ಇದನ್ನೂ ಓದಿ: ನಾನು ಟಿಪ್ಪು ಸುಲ್ತಾನ್ ಹೆಸರು ತೆಗೆದುಕೊಳ್ಳುತ್ತೇನೆ.. ನೀವು ಏನು ಮಾಡುತ್ತೀರಿ.. ಕಟೀಲ್ಗೆ ಓವೈಸಿ ತಿರುಗೇಟು