ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡುಪುರ ತಾಲೂಕಿನ ಚಂದ್ರೇ ಗ್ರಾಮದಲ್ಲಿ ಯಾರೋ ದುಷ್ಕರ್ಮಿಗಳು ಆಗ ತಾನೆ ಜನಿಸಿದ ಗಂಡು ಶಿಶುವನ್ನು ಪಾಳು ಬಾವಿಯಲ್ಲಿ ಬಿಸಾಕಿ ಹೋಗಿದ್ದರು. ಇದನ್ನು ಸ್ಥಳೀಯರು ಗಮನಿಸಿ ನವಜಾತ ಶಿಶುವನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮೆಡಿಕಲ್ ಕಾಲೇಜಿಗೆ ದಾಖಲಿಸಿದ್ದರು. ಇಂದು ಸಚಿವ ಗೋಪಾಲಯ್ಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಗುವಿನ ಆರೋಗ್ಯ ವಿಚಾರಿಸಿದ್ದಾರೆ.
ಮತ್ತೊಂದೆಡೆ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದ 30ಕ್ಕೂ ಹೆಚ್ಚು ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಇಲ್ಲಿಗೂ ಸಚಿವರು ಭೇಟಿ ನೀಡಿ ಮಕ್ಕಳಿಗೆ ಫಲಹಾರ ನೀಡುವ ಮೂಲಕ ಅವರ ಯೋಗಕ್ಷೇಮ ವಿಚಾರಿಸಿದರು.
ನಂತರ ಮಾತನಾಡಿದ ಸಚಿವrಉ, ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಲಾಗಿದೆ. ಮಕ್ಕಳು ಎಲ್ಲರೂ ಸುರಕ್ಷಿತವಾಗಿದ್ದಾರೆ. ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಸರ್ಕಾರಿ ಶಾಲೆಗಳಿಗೆ ಭೇಟಿ ಕೊಟ್ಟು ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಸರಿ ಸರಿಪಡಿಸುತ್ತೇನೆ ಎಂದರು.
ಇದನ್ನೂ ಓದಿ: ಪಾಳು ಬಾವಿಯಲ್ಲಿ ನವಜಾತ ಗಂಡು ಶಿಶು ಪತ್ತೆ.. ಹುಟ್ಟುತ್ತಲೇ ಅನಾಥವಾದ ಕಂದಮ್ಮ