ಮಂಡ್ಯ: ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗುವಂತೆ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳ ಗಮನಕ್ಕೆ ಈಗಾಗಲೇ ತರಲಾಗಿದೆ ಎಂದು ಸಚಿವ ನಾರಾಯಣಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಮದ್ದೂರು ಗೆಜ್ಜಲಗೆರೆ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ದುಃಸ್ಥಿತಿಯಲ್ಲಿದ್ದ ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಪುನಾರಂಭ ಮಾಡಲಾಗಿದೆ. ಆದರೆ, ನೌಕರರು ಯೂನಿಯನ್ ಮಾಡಿಕೊಂಡು ಗಲಾಟೆ ನಡೆಸುತ್ತಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಕಾರ್ಖಾನೆಗಳ ಸ್ಥಾಪನೆಗೆ ಉದ್ಯಮಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದರು.
ಮೈಶುಗರ್ ಪ್ರಾರಂಭ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಜಿಲ್ಲೆಯಲ್ಲಿ ನಿತ್ಯ ಧರಣಿ, ಪ್ರತಿಭಟನೆಗಳು ನಡೆಯುತ್ತಿವೆ. ಇದರಿಂದ ಮೈಶುಗರ್ ಆರಂಭಕ್ಕೆ ಉದ್ಯಮಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಸಚಿವ ಕೆ.ಸಿ.ನಾರಾಯಣ ಗೌಡ ತಿಳಿಸಿದರು.