ಮಂಡ್ಯ: ಕೋವಿಡ್ ಸೋಂಕಿತರಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಐಸೋಲೇಷನ್ ವಾರ್ಡ್ಗೆ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ತಿಳಿಸಿದರು.
ಮಂಡ್ಯ ಮೆಡಿಕಲ್ ಕಾಲೇಜಿನ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಸಿಸಿಟಿವಿಯಲ್ಲಿ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಜಿಲ್ಲಾ ಪಂಚಾಯತ್ ಸಿಇಒ ದಿವ್ಯ ಪ್ರಭು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶ್ವಿನಿಯವರಿಗೆ ಸೂಚನೆ ನೀಡಿದ್ದೇನೆ ಎಂದರು.
ಓದಿ : ಶಹಾಬಾದ್ ಇಎಸ್ಐಸಿ ಆಸ್ಪತ್ರೆಗೆ ಕಾಯಕಲ್ಪ: ಕಾಮಗಾರಿ ಪರಿಶೀಲಿಸಿದ ಸಚಿವ ನಿರಾಣಿ
ಶಾಸಕ ಎಂ. ಶ್ರೀನಿವಾಸ್, ಡಿಹೆಚ್ಒ ಮಂಚೇಗೌಡ, ಮಿಮ್ಸ್ ನಿರ್ದೇಶಕ ಡಾ. ಹರೀಶ್ ಮತ್ತಿತರ ಅಧಿಕಾರಿಗಳು ಸಚಿವರಿಗೆ ಸಾಥ್ ನೀಡಿದರು.