ETV Bharat / state

Covid ನಿಯಂತ್ರಣ ಸಂಬಂಧ ಸಭೆ ನಡೆಸಿದ ನಾರಾಯಣಗೌಡ: ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಸಚಿವ

ಎರಡನೇ ಬಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಂಡ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಭೇಟಿ ನೀಡಿದ್ದರು. ಈ ವೇಳೆ ಕೋವಿಡ್ ನಿಯಂತ್ರಣ ಸಂಬಂಧ ಇಂದು ಅಧಿಕಾರಿಗಳ ಜೊತೆ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಸಭೆ ನಡೆಸಿದರು.

Minister Narayana gowda
ನಾರಾಯಣಗೌಡ
author img

By

Published : Aug 6, 2021, 7:11 PM IST

ಮಂಡ್ಯ: ಕೋವಿಡ್ ಮೂರನೇ ಅಲೆ ಎದುರಾಗುವ ಸಂದರ್ಭ ಬಂದರೂ ಸಹ ಆಕ್ಸಿಜನ್ ಘಟಕ ನಿರ್ಮಾಣ ಕುಂಠಿತವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕೋವಿಡ್​ ನಿಯಂತ್ರಣ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ನಾರಾಯಣಗೌಡ

ಎರಡನೇ ಬಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಂಡ್ಯಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಕೋವಿಡ್ ನಿಯಂತ್ರಣ ಸಂಬಂಧ ಇಂದು ಅಧಿಕಾರಿಗಳ ಜೊತೆ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಸಭೆ ನಡೆಸಿದರು.

ಕೊರೊನಾ 2ನೇ ಅಲೆ ವೇಳೆ ಆಕ್ಸಿಜನ್ ಅಭಾವದಿಂದ ಸೋಂಕಿತರು ಸಾಕಷ್ಟು ಸಂಕಷ್ಟ ಪಟ್ಟರು. ಹೀಗಾಗಿ ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪಿಸಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಆದರೆ, ಈವರೆಗೆ ನಾಲ್ಕು ತಾಲೂಕುಗಳಲ್ಲಿ ಮಾತ್ರ ಘಟಕ ಸ್ಥಾಪನೆಯಾಗಿವೆ. ಇನ್ನುಳಿದ ಘಟಕಗಳು ಸ್ಥಾಪನೆ ಆಗುವುದು ಯಾವಾಗ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಬಳಿಕ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಹೊಂದಬೇಕು. ಹೊರ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ನಮ್ಮ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮವಹಿಸಬೇಕು. ಮದುವೆ, ಸಮಾರಂಭಗಳಲ್ಲಿ 30ಕ್ಕಿಂತ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು ಎಂದು ಡಿಸಿಗೆ ಸೂಚನೆ ನೀಡಿದರು.

ಓದಿ: ಮಾಜಿ ಸಿಎಂ BSY ವಿರುದ್ಧ ಭ್ರಷ್ಟಾಚಾರ ಆರೋಪ: ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಯಲ್ಲಿದ್ದು, ಕೋವಿಡ್‌ ಯಾವುದೇ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಬಾರದು ಎಂದು ತಹಶೀಲ್ದಾರ್​​​ಗಳಿಗೆ ಎಚ್ಚರಿಕೆ ನೀಡಿದರು. ಅಲ್ಲದೇ ಮುಜರಾಯಿ ಹಾಗೂ ಖಾಸಗಿ ದೇವಾಲಯಗಳಿಗೆ ಸಾರ್ವಜನಿಕರ ನಿರ್ಬಂಧ ಹೇರಲು ಸೂಚನೆ ನೀಡಿದರು.

ತಾಲೂಕು ಆಕ್ಸಿಜನ್ ಉತ್ಪಾದನಾ ಘಟಕದ ವಿವರ:

ಕೆಆರ್​​ ಪೇಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ 400 ಎಲ್‍ಪಿಎಂ, ಪಾಂಡವಪುರ ಆಸ್ಪತ್ರೆಯಲ್ಲಿ - 400 ಎಲ್​​​ಪಿಎಂ, ಮಳವಳ್ಳಿ -390 ಎಲ್‍ಪಿಎಂ, ಮದ್ದೂರು -400 ಎಲ್‍ಪಿಎಂ, ಶ್ರೀರಂಗಪಟ್ಟಣ-500 ಎಲ್‍ಪಿಎಂ, ನಾಗಮಂಗಲ - 500 ಎಲ್‍ಪಿಎಂ, ಮಂಡ್ಯಮಿಮ್ಸ್ -390 ಎಲ್‍ಪಿಎಂ ಹಾಗೂ ಮಂಡ್ಯ ಮಿಮ್ಸ್-1000 ಎಲ್‍ಪಿಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪಿಸಲಾಗುವುದು ಎಂದರು.

ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಬಲಪಡಿಸಿ:

ಹಳ್ಳಿಗಳಿಗೆ ಬೇರೆ ರಾಜ್ಯ, ಜಿಲ್ಲೆಯಿಂದ ಹೆಚ್ಚು ಜನರು ವಲಸೆ ಬರುತ್ತಿದ್ದು, ಇವರನ್ನು ಪತ್ತೆ ಹಚ್ಚಿ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಿ ಎಂದರಲ್ಲದೇ ಕೊರೊನಾ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ತಗಲುವ ಸಾಧ್ಯತೆಯಿದ್ದು, ಈ ಸಂಬಂಧ ಐಸಿಯು ಬೆಡ್, ಇನ್ನಿತರ ಸೌಲಭ್ಯಗಳ ಒದಗಿಸುವಿಕೆ ಬಗ್ಗೆ ಕ್ರಮವಹಿಸಬೇಕೆಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.