ETV Bharat / state

ಶಾಲೆಗಳು ಪುನಾರಂಭ ಹಿನ್ನೆಲೆ : ಮಕ್ಕಳಿಗೆ ಸಿಹಿ ಹಂಚಿ ಧೈರ್ಯ ತುಂಬಿದ ಸಚಿವ ನಾರಾಯಣಗೌಡ

ಶಾಲೆ ಆರಂಭಕ್ಕೆ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ಮಕ್ಕಳನ್ನು ಶಾಲೆಗೆ ಕಳಿಸಲು ಪಾಲಕರ ಅನುಮತಿ, ಕೋವಿಡ್ ಸುರಕ್ಷತೆಯೊಂದಿಗೆ ಶಾಲೆಗಳಲ್ಲಿ ಕಲಿಕೆ, ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ..

Minister Narayana Gowda
ಸಚಿವ ನಾರಾಯಣಗೌಡ
author img

By

Published : Aug 23, 2021, 3:44 PM IST

ಮಂಡ್ಯ : ಇಂದಿನಿಂದ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಆತಂಕಕ್ಕೆ ಒಳಗಾಗದೆ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವಂತೆ ಜಿಲ್ಲಾ ಉಸ್ತುವಾರಿ ಹಾಗೂ ಕ್ರೀಡಾ ಸಚಿವ ಕೆ ಸಿ ನಾರಾಯಣಗೌಡ ಮಕ್ಕಳಲ್ಲಿ ಧೈರ್ಯ ತುಂಬಿದ್ದಾರೆ.

ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಚಿವರು

ಇಂದು ನಗರದ ಪೊಲೀಸ್ ಕಾಲೋನಿಯಲ್ಲಿರುವ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು, ಮಕ್ಕಳಿಗೆ ಮಾಸ್ಕ್, ಸಾನಿಟೈಸರ್ ಹಾಗೂ ಸಿಹಿ ಹಂಚಿ ಶುಭ ಹಾರೈಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕೊರೊನಾದ ಮೊದಲ ಮತ್ತು ಎರಡನೇ ಅಲೆಯ ನಂತರ ಜಿಲ್ಲೆಯಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಪುನಾರಂಭಗೊಂಡಿವೆ. ಈ ದಿನ ಮುಖ್ಯ ಮಂತ್ರಿಗಳು ಶಾಲೆ-ಕಾಲೇಜುಗಳಿಗೆ ಭೇಟಿ ನೀಡಿ ಮಕ್ಕಳಿಗೆ ಧೈರ್ಯ ತುಂಬಿದ್ದಾರೆ ಎಂದರು.

ಶಾಲೆ ಆರಂಭಕ್ಕೆ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ಮಕ್ಕಳನ್ನು ಶಾಲೆಗೆ ಕಳಿಸಲು ಪಾಲಕರ ಅನುಮತಿ, ಕೋವಿಡ್ ಸುರಕ್ಷತೆಯೊಂದಿಗೆ ಶಾಲೆಗಳಲ್ಲಿ ಕಲಿಕೆ, ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ ಎಂದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯೊಂದಿಗೆ ಜಿಲ್ಲೆಯ ಪ್ರತಿ ಶಾಲೆಗಳಿಗೆ ಭೇಟಿ ನೀಡಿ ಮೂಲಸೌಕರ್ಯ ಹಾಗೂ ಶಾಲಾ- ಕಾಲೇಜುಗಳ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಿದ್ದಾರೆ ಎಂದರು.

ಓದಿ: ಕುರುಕುರೆ ಫ್ಯಾಕ್ಟರಿಯಲ್ಲಿ ಸಿಲಿಂಡರ್ ಸ್ಫೋಟ.. ಇಬ್ಬರ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.