ಮಂಡ್ಯ : ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಮಕರ ಲಗ್ನದಲ್ಲಿ ಬ್ರಹ್ಮಕುಂಡಿಕೆಯಲ್ಲಿ ತೀರ್ಥೋದ್ಭವವಾದ ಹಿನ್ನೆಲೆ ಮೊದಲ ಬಾರಿಗೆ ಸಚಿವ ನಾರಾಯಣಗೌಡ ಹಾಗೂ ಅವರ ತಾಯಿ ತಲಕಾವೇರಿಗೆ ತೆರಳಿ ಅಪರೂಪದ ದೃಶ್ಯ ಕಣ್ತುಂಬಿಕೊಂಡರು.
ಮಂಡ್ಯ ಜಿಲ್ಲೆಯ ಪರವಾಗಿ ಬಂದು ತಾಯಿಯ ದರ್ಶನ ಪಡೆದಿದ್ದೇನೆ. ಪ್ರಸಾದವನ್ನು ತೆಗೆದುಕೊಂಡು ಹೋಗಿ, ಮಂಡ್ಯದ ಕಾಳಿಕಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಭಕ್ತರಿಗೆ ಹಂಚಲಾಗುತ್ತದೆ. ಮೊದಲ ಬಾರಿಗೆ ಕೋಟ್ಯಂತರ ಜನರಿಗೆ ನೀರು, ಅನ್ನವನ್ನ ನೀಡುತ್ತಿರುವ ತಾಯಿಯ ದರ್ಶನ ಮಾಡಿದ್ದೇನೆ ಎಂದರು.
ಕೋವಿಡ್ ಹಿನ್ನೆಲೆ ಹೆಚ್ಚಿನ ಜನರಿಗೆ ಅವಕಾಶ ನೀಡಿಲ್ಲ. ಆದರೆ, ಎಲ್ಲರಿಗೂ ಪ್ರಸಾದ ನೀಡುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಗೊಂದಲ ಆಗದಂತೆ ಜಿಲ್ಲಾಡಳಿತ ಎಲ್ಲಾ ರೀತಿಯ ವ್ಯವಸ್ಥೆ ಮಾಡಿದೆ. ಸರ್ವರಿಗೂ ಅಭಿನಂದನೆ ತಿಳಿಸುತ್ತೇನೆ.
ದೇವಿ ಎಲ್ಲರಿಗೂ ಒಳ್ಳೇದು ಮಾಡಲಿ. ರಾಜ್ಯದಿಂದ ದೇಶದಿಂದ ಮಹಾಮಾರಿ ಕೊರೊನಾ ದೂರವಾಗಲಿ ಎಂದು ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಸಚಿವ ನಾರಾಯಣ ಗೌಡ ತಿಳಿಸಿದರು.