ಮಂಡ್ಯ: ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆ ಆಗದಂತೆ ಹಾಗೂ ಕೋವಿಡ್ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಕೊಡುವಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ. ನಾರಾಯಣ ಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಕೋವಿಡ್ ತಡೆಗಟ್ಟುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿ ಸಂಪೂರ್ಣವಾಗಿ ಮಟ್ಟ ಹಾಕಲು ಎಲ್ಲರೂ ಆರೋಗ್ಯದಿಂದ ಇರಲು ಗುಣಮಟ್ಟದ ಚಿಕಿತ್ಸೆ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಅಧಿಕಾರಿಗಳು ಜಿಲ್ಲೆಯ ಕೇಂದ್ರ ಸ್ಥಾನ ಬಿಟ್ಟು ಹೋಗದೆ ಇಲ್ಲೇ ಇರುವಂತೆ ಜಿಲ್ಲಾಧಿಕಾರಿಗಳ ಮೂಲಕ ಸೂಚಿಸಿದರಲ್ಲದೇ, ನಾನೂ ನಿಮ್ಮೊಂದಿಗೆ 24 ಗಂಟೆಗಳ ಕಾಲ ಇದ್ದು, ಏನೇ ಸಮಸ್ಯೆ ಬಂದರೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು ತಕ್ಷಣ ಸಮಸ್ಯೆಗಳನ್ನು ಬಗೆಹರಿಸಲು ಬದ್ಧ ಎಂದು ಅಭಯ ನೀಡಿದರು.