ETV Bharat / state

ಮಂಡ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತೆ ಶವ ಪತ್ತೆ: ಅತ್ಯಾಚಾರ, ಕೊಲೆ ಆರೋಪ - ಮಂಡ್ಯ ಜಿಲ್ಲೆಯ ಬೂಕನಕೆರೆ

ನೇಣು ಬಿಗಿದ ಸ್ಥಿತಿಯಲ್ಲಿ 14 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ನಡೆದಿದೆ. ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ, ಅದು ಕೊಲೆ ಎಂದು ಮೃತ ಬಾಲಕಿಯ ಪೋಷಕರು ಆರೋಪಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
author img

By

Published : Dec 18, 2021, 12:24 PM IST

Updated : Dec 18, 2021, 12:38 PM IST

ಮಂಡ್ಯ: ನೇಣು ಬಿಗಿದ ಸ್ಥಿತಿಯಲ್ಲಿ 14 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹುಟ್ಟೂರು ಬೂಕನಕೆರೆಯಲ್ಲಿ ಈ ಘಟನೆ ನಡೆದಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತೆ ಶವ ಪತ್ತೆ ಪ್ರಕರಣ: ಮಾಹಿತಿ ನೀಡಿದ ಮಂಡ್ಯ ಎಸ್​​ಪಿ

ಬಾಲಕಿ ಸಾವಿನ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ, ಅದು ಕೊಲೆ ಎಂದು ಆರೋಪಿಸಿ ಮೃತ ಬಾಲಕಿಯ ಪೋಷಕರು ಕೆಆರ್​​ ಪೇಟೆ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

ಗರ್ಭಿಣಿಯಾಗಿದ್ದ ಅಪ್ರಾಪ್ತೆ:

ಕಳೆದ 15 ದಿನಗಳ ಹಿಂದೆ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಬಾಲಕಿಯನ್ನ ತಾಯಿ ಆಸ್ಪತ್ರೆಗೆ ಕರೆದೊಯ್ದಿದ್ದರು. ವೈದ್ಯಕೀಯ ಪರೀಕ್ಷೆ ಬಳಿಕ ಬಾಲಕಿ ಗರ್ಭಿಣಿ ಎಂಬ ವಿಚಾರವನ್ನು ವೈದ್ಯರು ದೃಢಪಡಿಸಿದ್ದರು. ತನ್ನ ಅಪ್ರಾಪ್ತ ವಯಸ್ಸಿನ ಮಗಳು ಗರ್ಭಿಣಿ ಎಂಬ ವಿಚಾರ ತಿಳಿದು ಬಾಲಕಿಯ ತಾಯಿ ಆಸ್ಪತ್ರೆಯಲ್ಲಿಯೇ ಕುಸಿದು ಬಿದ್ದಿದ್ದರಂತೆ.

ಪಕ್ಕದ ಮನೆಯ ನಿವಾಸಿ ಪರಮೇಶ್(50) ಎಂಬಾತ ಲೈಂಗಿಕ ಕಿರುಕುಳ ನೀಡುತ್ತಿದ್ದ ಕುರಿತು ಬಾಲಕಿಯು ತನ್ನ ತಾಯಿ ಬಳಿ ಹೇಳಿಕೊಂಡಿದ್ದಳಂತೆ. ತನ್ನ ಮಗಳ ಮೇಲೆ ಪರಮೇಶ್ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಸವರ್ಣೀಯ ಎಂಬ ಕಾರಣಕ್ಕೆ ಹಾಗೂ ಮರ್ಯಾದೆಗೆ ಹೆದರಿ ಈ ವಿಚಾರವನ್ನು ಮುಚ್ಚಿಟ್ಟಿದ್ದೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ. ಅತ್ಯಾಚಾರ ವಿಚಾರ ಬೆಳಕಿಗೆ ಬಂದರೆ, ತಾನು ತಪ್ಪಿತಸ್ಥ ಆಗ್ತೀನಿ ಎಂಬ ಭಯದಿಂದ ಮಗಳನ್ನ ಕೊಲೆ ಮಾಡಿದ್ದಾನೆ ಎಂದು ಪರಮೇಶ್ ವಿರುದ್ಧ ಮೃತ ಬಾಲಕಿಯ ಕುಟುಂಬಸ್ಥರು ಆರೋಪಿದ್ದಾರೆ.

ಮೃತ ಬಾಲಕಿಯ ತಾಯಿ ಮೊನ್ನೆ(ಗುರುವಾರ) ಕೆಲಸದಿಂದ ವಾಪಸ್​​ ಆದ ವೇಳೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಅಪಾರ್ಟ್‍ಮೆಂಟ್‍ನ ಐದನೇ ಮಹಡಿಯಿಂದ ಆಯತಪ್ಪಿ ಬಿದ್ದು ಬಾಲಕ ಸ್ಥಳದಲ್ಲೇ ಸಾವು

Last Updated : Dec 18, 2021, 12:38 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.