ಮಂಡ್ಯ: ಸಂಬಂಧಿಕನೋರ್ವ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇರೆಗೆ ಆತನನ್ನು ಪೊಲೀಸರು ಬಂಧಿಸಿರುವ ಘಟನೆ ನಗರದ ಬೀಡಿ ಕಾಲೋನಿಯಲ್ಲಿ ನಡೆದಿದೆ.
ಶಾಲೆಯಿಂದ ಬಾಲಕಿಯನ್ನು ಕರೆತಂದಿರುವ ಆರೋಪಿ ಆಕೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಸಹಕರಿಸದ ಕಾರಣ ಆಕೆಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರಕ್ಕೆ ಮುಂದಾಗಿದ್ದಾನೆ. ಸಂತ್ರಸ್ತೆಯ ಮುಖ, ಮೈಭಾಗಕ್ಕೆ ಗಾಯವಾಗಿದ್ದು, ಘಟನೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಾಳೆ.
ಇದಾದ ನಂತರ ಪೋಷಕರು ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಕೇಸು ದಾಖಲಾಗಿದೆ.
ಇದನ್ನೂ ಓದಿ: ಕೊಲೆಗೆ ಸುಪಾರಿ ಕೊಟ್ಟಿದ್ದ ಮಹಿಳೆಯ ಬರ್ಬರ ಹತ್ಯೆ: ಪೊಲೀಸರಿಂದ ಹಂತಕರ ಹುಡುಕಾಟ