ಮಂಡ್ಯ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮನೆಯ ಮುಂದೆ ನಿಲ್ಲಿಸಲಾಗಿದ್ದ ಬೈಕ್ ಮತ್ತು ಆಟೋಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಅಚ್ಚಪ್ಪನ ಕೊಪ್ಪಲು ಗ್ರಾಮದ ವಿದ್ಯಾನಗರದಲ್ಲಿ ನಡೆದಿದೆ.
ಅಚ್ಚಪ್ಪನ ಕೊಪ್ಪಲು ಗ್ರಾಮದ ಮಹದೇವು ಎಂಬುವರ ಆಟೋ ಮತ್ತು ಬೈಕ್ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಬೆಂಕಿ ಹತ್ತಿ ಉರಿಯುತ್ತಿರುವುದನ್ನು ಗಮನಿಸಿದ ಮನೆಯವರು ಬೆಂಕಿ ನಂದಿಸಿದ್ದಾರೆ. ಘಟನೆಯಿಂದ ಆಟೋ ಮತ್ತು ಬೈಕ್ ಹಾನಿಯಾಗಿದೆ.
ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಬಸ್- ಬೊಲೆರೋ ನಡುವೆ ಭೀಕರ ಅಪಘಾತ: ನಾಲ್ವರು ಮಹಿಳೆಯರು ಸಾವು, 12 ಮಂದಿಗೆ ಗಾಯ