ETV Bharat / state

ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್​​ಡಿಕೆ ಸ್ಪರ್ಧಿಸಬೇಕು: ಶಾಸಕ ಎಂ ಶ್ರೀನಿವಾಸ್ ಒತ್ತಾಯ - ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಲ್ಲಿ ಸ್ಫರ್ಧಿಸಿದರೆ ಉದ್ಧಾರವಾಗಲಿದೆ ಎಂಬುದು ನನ್ನ ಭಾವನೆ ಎಂದು ಶಾಸಕ ಎಂ ಶ್ರೀನಿವಾಸ್​ ತಿಳಿಸಿದ್ದಾರೆ.

ಶಾಸಕ ಎಂ ಶ್ರೀನಿವಾಸ್
ಶಾಸಕ ಎಂ ಶ್ರೀನಿವಾಸ್
author img

By

Published : Apr 18, 2023, 4:10 PM IST

ಶಾಸಕ ಎಂ ಶ್ರೀನಿವಾಸ್

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯಲ್ಲಿ ನೆರೆಯ ತುಮಕೂರು, ಹಾಸನ, ಶಿವಮೊಗ್ಗಕ್ಕಿಂತ ಹಿಂದುಳಿದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂದು ಶಾಸಕ ಎಂ ಶ್ರೀನಿವಾಸ್ ಒತ್ತಾಯಿಸಿದರು.

ಮಂಡ್ಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ಅನೇಕ ಅಭ್ಯರ್ಥಿಗಳು ಉದ್ಭವಗೊಂಡಿದ್ದಾರೆ. ಹೆಚ್​ ಡಿ ಕುಮಾರಸ್ವಾಮಿ ಇಲ್ಲಿ ಸ್ಪರ್ಧಿಸಿದರೆ ಮಂಡ್ಯ ಉದ್ಧಾರವಾಗುತ್ತದೆ ಎಂಬ ಭಾವನೆ ನನ್ನದಾಗಿದ್ದು, ಕ್ಷೇತ್ರ ತ್ಯಾಗಕ್ಕೆ ಮುಂದಾಗುತ್ತೇನೆ ಎಂದರು. ಈಗಾಗಲೇ ಎರಡು ಬಾರಿ ಹೇಳಿದ್ದೇನೆ. ಇದೀಗ ಮೂರನೇ ಬಾರಿ ಹೆಚ್​ ಡಿ ಕುಮಾರಸ್ವಾಮಿ ಅವರಿಗೆ ಸ್ಪರ್ಧಿಸುವಂತೆ ಆಹ್ವಾನಿಸಿದ್ದೇನೆ. ಅವರನ್ನು ಹೊರತುಪಡಿಸಿದರೆ ನಾನು ಸ್ಪರ್ಧಿಸಲು ಬದ್ಧನಾಗಿದ್ದೇನೆ. ನನ್ನೊಟ್ಟಿಗೆ ಹೆಚ್ ಎನ್ ಯೋಗೇಶ್, ಹೆಚ್ ಎಸ್ ಮಂಜು ಸ್ಪರ್ಧಾಕಾಂಕ್ಷಿಗಳಾಗಿದ್ದಾರೆ ಎಂದರು.

ಕ್ಷೇತ್ರಕ್ಕೆ ಆಗಿರುವ ವಂಚನೆ ಸರಿದೂಗಿಸಬೇಕು: ಅನ್ಯ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾದು ನೋಡುತ್ತೇನೆ, ಪಕ್ಷದ ತೀರ್ಮಾನಕ್ಕೆ ಬದ್ಧನಾಗುತ್ತೇನೆ ಎಂದು ಗೊಂದಲದ ಉತ್ತರ ನೀಡಿದರು. ಅಭ್ಯರ್ಥಿ ವಿಚಾರದಲ್ಲಿ ಆಗಿರುವ ಗೊಂದಲ ನಿವಾರಣೆಗೆ ಕುಮಾರಸ್ವಾಮಿಯೇ ಸ್ಪರ್ಧಿಸಬೇಕು. ಅನುದಾನ ತಾರತಮ್ಯದಲ್ಲಿ ಕ್ಷೇತ್ರಕ್ಕೆ ಆಗಿರುವ ವಂಚನೆ ಸರಿದೂಗಿಸಬೇಕೆಂದು ಆಗ್ರಹಿಸಿದರು.

ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಕೆ: 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ನಿನ್ನೆ (ಸೋಮವಾರ) ಮಂಡ್ಯ ಜಿಲ್ಲೆಯಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬೃಹತ್ ರ‍್ಯಾಲಿಗಳ ಮೂಲಕ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷದ ಅಭ್ಯರ್ಥಿಗಳು ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಶ್ರೀರಂಗಪಟ್ಟಣದ ಬಿಜೆಪಿ ಅಭ್ಯರ್ಥಿಯಿಂದ ಶಕ್ತಿ ಪ್ರದರ್ಶನ: ಶ್ರೀರಂಗಪಟ್ಟಣದ ಬಿಜೆಪಿ ಅಭ್ಯರ್ಥಿ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ನಟ ದರ್ಶನ್ ಹಾಗೂ ಸಂಸದೆ ಸುಮಾಲತಾ ಜೊತೆಗೂಡಿ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ನಡೆಸಿ, ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಲೋಕಸಭೆ ಬಳಿಕ ವಿಧಾನಸಭಾ ಚುನಾವಣೆಗೆ ದರ್ಶನ್ ಎಂಟ್ರಿ ಕೊಟ್ಟು ತಮ್ಮ ಆಪ್ತನ ಪರ ಪ್ರಚಾರ ನಡೆಸಿದರು.

ಇದನ್ನೂ ಓದಿ: RSSನವರು ನನಗೆ ನೂರಕ್ಕೆ ನೂರರಷ್ಟು ಮತ ಹಾಕುತ್ತಾರೆ: ಕೈ ಅಭ್ಯರ್ಥಿ ಸವದಿ ವಿಶ್ವಾಸದ ನುಡಿ!

ಜೈಕಾರ ಕೂಗಿ ಸಂಭ್ರಮಿಸಿದ ಬೆಂಬಲಿಗರು : ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಕೂಡಾ ಶ್ರೀರಂಗಪಟ್ಟಣದಲ್ಲಿ ಹೆಚ್ಚಿನ ಕಾರ್ಯಕರ್ತರನ್ನು ಸೇರಿಸಿ ತಮ್ಮದೇ ಶೈಲಿಯಲ್ಲಿ ಶಕ್ತಿ ಪ್ರದರ್ಶನ ಮಾಡಿ ಬಿಜೆಪಿಗೆ ಟಕ್ಕರ್ ಕೊಟ್ಟರು. ಇದೇ ವೇಳೆ ಅಪಾರ ಬೆಂಬಲಿಗರು ಜೈಕಾರ ಕೂಗಿ ಸಂಭ್ರಮಿಸಿದರು. ಬಳಿಕ ಮಾತನಾಡಿದ ಅವರು, ಇವತ್ತು ನಾಮಪತ್ರ ಸಲ್ಲಿಸಿದ್ದೇನೆ. ನನ್ನ ತಂದೆ ತಾಯಿ ಆಶೀರ್ವಾದ ದೇವರ ಕೃಪೆ ನಮ್ಮ ಮೇಲೆ ಇದೆ. ಪಕ್ಷದ ಕಾರ್ಯಕರ್ತರು, ನಾಯಕರುಗಳು ನನಗೆ ಆಶೀರ್ವಾದ ಮಾಡಿದ್ದಾರೆ. ಸಹಕಾರ ಕೊಟ್ಟ ಎಲ್ಲರಿಗೂ ಧನ್ಯವಾದ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಮಂಡ್ಯ: ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.