ಮಂಡ್ಯ: ಪಟ್ಟಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಕೆಂಪೇಗೌಡ ಜಯಂತಿಯ ಮೆರವಣಿಗೆಯಲ್ಲಿ ತಮಟೆ ಸದ್ದಿಗೆ ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಸ್ಟೆಪ್ ಹಾಕುವ ಮೂಲಕ ಗಮನ ಸೆಳೆದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಪಾಲ್ಗೊಂಡ ಶಾಸಕರು, ತಮಟೆ ಬಡಿಯುತ್ತಿದ್ದವರನ್ನು ಕರೆದು ಸ್ಟೆಪ್ ಹಾಕಿದರು. ಶಾಸಕರು ಸ್ಟೆಪ್ ಹಾಕುತ್ತಿದ್ದಂತೆ ಅಧಿಕಾರಿಗಳು, ಮುಖಂಡರು ಚಪ್ಪಾಳೆ ತಟ್ಟಿ ಅಭಿನಂದಿಸಿದರು.
ಜಿಲ್ಲಾದ್ಯಂತ ಸಂಭ್ರಮದ ಜಯಂತ್ಯುತ್ಸವ:
ಕೆಂಪೇಗೌಡರ ಜಯಂತಿಯನ್ನು ಜಿಲ್ಲಾದ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಜಿಲ್ಲಾಡಳಿತದ ವತಿಯಿಂದ ಮಂಡ್ಯ ನಗರದಲ್ಲಿ ಜಯಂತಿ ಆಚರಣೆ ಮಾಡಲಾಯಿತು. ಪ್ರಮುಖ ರಸ್ತೆಗಳಲ್ಲಿ ಕೆಂಪೇಗೌಡರ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ಹಲವು ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇನ್ನು ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣ, ನಾಗಮಂಗಲದಲ್ಲೂ ಕೆಂಪೇಗೌಡರ ಜಯಂತಿ ಆಚರಣೆ ಮಾಡಲಾಗಿದೆ.