ಮಂಡ್ಯ: ಅವರಿಗೆ ಶಾಸ್ತ್ರ ಗೊತ್ತಿರಬೇಕೇನೋ, ಅಧಿಕಾರ ಮಾರಿಕೊಂಡ ಅವರಿಂದ ನಾನು ಪಾಠ ಕಲಿಯಬೇಕಾಗಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿಕೆಗೆ ಶಾಸಕ ಸುರೇಶ್ ಗೌಡ ಟಾಂಗ್ ನೀಡಿದರು.
ಓದಿ: ಮಹಾನಾಯಕನ ಹೆಸರು ಬಾಯ್ಬಿಟ್ಟ ಮಾಜಿ ಸಚಿವ: ಡಿಕೆಶಿಗೆ ರಮೇಶ್ ಜಾರಕಿಹೊಳಿ ಬಹಿರಂಗ ಸವಾಲು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರದಲ್ಲಿರುವ ಪಕ್ಷ ಸಹಜವಾಗಿ ಉಪಚುನಾವಣೆಗಳಲ್ಲಿ ಗೆಲ್ಲುತ್ತದೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಜೆಡಿಎಸ್ ಪಕ್ಷದಿಂದ ಉಪ ಚುನಾವಣೆಗಳು ನಡೆಯುವ ಎಲ್ಲ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಹಾಕಲಾಗುತ್ತಿದೆ.
ಸೂರ್ಯ ಚಂದ್ರರಷ್ಟೇ ನಾನು ಮುಂದಿನ ವಿಧಾನಸಭಾ ಚುನಾವಣೆಯ ಅಭ್ಯರ್ಥಿ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಮ್ಮತದಿಂದ ಚುನಾವಣೆ ಎದುರಿಸುತ್ತೇನೆ ಎಂದರು. ನನ್ನ ಅಭಿವೃದ್ಧಿ ಕಾರ್ಯಗಳು ನನ್ನ ಕೈಹಿಡಿಯಲಿವೆ.
ಚುನಾವಣೆಯ ಸ್ಪರ್ಧೆ ಬಗ್ಗೆ ವ್ಯಕ್ತಪಡಿಸಿದ ಶಾಸಕ ಸುರೇಶ್ ಗೌಡ ಕೊರೊನಾ 2ನೇ ಅಲೆ ಹೆಚ್ಚಾಗುತ್ತಿದೆ. ಸಾರ್ವಜನಿಕರು ಜಾಗೃತರಾಗಿರಬೇಕು. ಅಂತರ ಕಾಯ್ದುಕೊಳ್ಳಬೇಕು ಮಾಸ್ಕ್ ಧರಿಸಬೇಕು ಎಂದು ಜನತೆಗೆ ಮನವಿ ಮಾಡಿದರು.
ಅಭಿವೃದ್ಧಿ ಕಾಮಗಾರಿಗೆ ಚಾಲನೆ : ಮದ್ದೂರು ತಾಲೂಕಿನಲ್ಲಿ ಅಬಲವಾಡಿ ಸೇರಿ ಯಡವನಹಳ್ಳಿ, ಕಿರಂಗೂರು ಗ್ರಾಮದ ಸಿಸಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಸುಮಾರು 1.50 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಶಾಸಕ ಸುರೇಶ್ ಗೌಡ ಚಾಲನೆ ನೀಡಿದರು.