ಮಂಡ್ಯ: ಗಾಳಿಯಲ್ಲಿ ಗುಂಡು ಹಾರಿಸಿದ ಅರಣ್ಯ ಇಲಾಖೆ ಸಿಬ್ಬಂದಿಗೆ ನಾಗಮಂಗಲ ಶಾಸಕ ಸುರೇಶ್ ಗೌಡ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಹಾಲತಿ ಗ್ರಾಮದಲ್ಲಿ ನಡೆದಿದೆ.
ಜಮೀನು ವಿಚಾರವಾಗಿ ಅರಣ್ಯ ಇಲಾಖೆ ಹಾಗೂ ರೈತರ ನಡುವೆ ಹಾಲತಿ ಗ್ರಾಮದಲ್ಲಿ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳಕ್ಕೆ ಬಂದ ಶಾಸಕ ಸುರೇಶ್ ಗೌಡ, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನಲಾಗಿದೆ.
ಸರ್ವೇ ನಂಬರ್ 135ರಲ್ಲಿ ಅರಣ್ಯ ಇಲಾಖೆ ನೆಡುತೋಪು ಬೆಳೆಸಿತ್ತು. ಅದೇ ಜಮೀನಿಗಾಗಿ ಬಗರ್ ಹುಕುಂ ಸಾಗುವಳಿ ಅರ್ಜಿಗಳನ್ನ ರೈತರು ಸಲ್ಲಿಸಿದ್ದರು. ಆದರೆ ಜಮೀನು ವಶಪಡಿಸಿಕೊಳ್ಳಲು ಬಂದ ಅಧಿಕಾರಿಗಳ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದ್ದು, ಗಟ್ಟಿ ಧ್ವನಿಯಲ್ಲಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸಿ ರೈತರನ್ನು ಬೆದರಿಸಲು ಮುಂದಾಗಿದ್ದಾರೆ. ಆಗ ಅಧಿಕಾರಿಗಳ ವರ್ತನೆಗೆ ಶಾಸಕ ಸುರೇಶ್ ಗೌಡ ಬೈದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಸರ್ಕಾರಿ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಮಾಜಿ ಶಾಸಕ ಶಾಂತನಗೌಡ.. ವಿಡಿಯೋ ವೈರಲ್