ETV Bharat / state

ಮಂಡ್ಯದ ಜಲಋಷಿ, ಆಧುನಿಕ ಭಗೀರಥ ಕಾಮೇಗೌಡ ನಿಧನ: ಸಿಎಂ, ಮಾಜಿ ಪಿಎಂ ಸೇರಿ ಗಣ್ಯರಿಂದ ಸಂತಾಪ - ಕಲ್ಮನೆ ಕಾಮೇಗೌಡ ನಿಧನ

ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಕೆರೆಕಟ್ಟೆಗಳ ನಿರ್ಮಾತೃ ಹಾಗೂ ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿದ್ದ ಕಲ್ಮನೆ ಕಾಮೇಗೌಡರು ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

kamegowda
ಕಾಮೇಗೌಡ
author img

By

Published : Oct 17, 2022, 11:15 AM IST

Updated : Oct 17, 2022, 12:28 PM IST

ಬೆಂಗಳೂರು/ಮಂಡ್ಯ: ಜಲ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಕೊಂಡು ಸುಮಾರು15 ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎಂದೇ ಖ್ಯಾತಿ ಗಳಿಸಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಜಲಋಷಿ ಶ್ರೀ ಕಾಮೇಗೌಡರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ವೆಂಕಟಗೌಡ ಮತ್ತು ರಾಜಮ್ಮ ದಂಪತಿಯ ಪುತ್ರ ಕಾಮೇಗೌಡರು ಶಾಲೆಯ ಮೆಟ್ಟಿಲು ಹತ್ತಿ ಅಕ್ಷರ ಕಲಿತವರಲ್ಲ. ತಾವಾಯ್ತು, ತಮ್ಮ ಪಾಡಾಯ್ತು ಎಂದು ಕೆಲಸ ಮಾಡಿಕೊಂಡಿದ್ದ ಅವರಿಗೆ ಕುರಿಗಳ ಮೇಲಿನ ಪ್ರೀತಿಯೇ ಪರಿಸರದ ಕಾಳಜಿ ಬೆಳೆಸಿತು.

  • ಪರಿಸರ ಜೀವಿ, ಕೆರೆಗಳ ನಿರ್ಮಾಣದ ಮೂಲಕ ನೀರಿನ ಮಹತ್ವ ಸಾರಿದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಶ್ರೀ ಕಲ್ಮನೆ ಕಾಮೇಗೌಡ ಇನ್ನಿಲ್ಲ ಎನ್ನುವ ಸುದ್ದಿ ಕೇಳಿ ಬಹಳ ನೋವಾಯಿತು.1/3 pic.twitter.com/FdlHwScsq1

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 17, 2022 " class="align-text-top noRightClick twitterSection" data=" ">

ಇದನ್ನೂ ಓದಿ:ಕಾಮೇಗೌಡರ ಕೆರೆಗಳ ನಿರ್ಮಾಣದ ಕಥೆ -ವ್ಯಥೆ : ಇಲ್ಲಿದೆ ವಾಸ್ತವ ಚಿತ್ರಣ

ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ಮನ್​ ಕಿ ಬಾತ್​ ನಲ್ಲಿ ಕಾಮೇಗೌಡರನ್ನು ಶ್ಲಾಘಿಸಿದ್ದರು. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಪುರಸ್ಕಾರಗಳನ್ನು ನೀಡಿ ಗೌರವಿಸಲಾಗಿದೆ.

ಇದನ್ನೂ ಓದಿ: 'ಕೆರೆಗಳ ಮನುಷ್ಯ' ಕಾಮೇಗೌಡರಿಗೆ ಕೆಎಸ್ಆರ್‌ಟಿಸಿ ಗೌರವ: ಉಚಿತ ಬಸ್​​​​ ಪಾಸ್​​ ವಿತರಣೆ

ಸಿಎಂ ಸಂತಾಪ: ಆಧುನಿಕ ಭಗೀರಥ ಕಾಮೇಗೌಡರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.

  • 15ಕ್ಕೂ ಹೆಚ್ಚು ಕೆರೆಗಳನ್ನು ಕಟ್ಟಿ ಜಲ ಸಂರಕ್ಷಣೆಯ ಕಾಯಕದಲ್ಲಿ ಸದಾ ನಿರತರಾಗಿದ್ದ ಮಳವಳ್ಳಿಯ ಕಾಮೇಗೌಡರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಪ್ರಧಾನಿ ಶ್ರೀ @narendramodi ಅವರಿಂದ ಆಧುನಿಕ ಭಗೀರಥ ಎಂದು ಪ್ರಶಂಸೆ ಪಡೆದುಕೊಂಡಿದ್ದ ಕಾಮೇಗೌಡರ ಜೀವನ ಎಲ್ಲರಿಗೂ ಮಾದರಿ.

    — B.S.Yediyurappa (@BSYBJP) October 17, 2022 " class="align-text-top noRightClick twitterSection" data=" ">

ದೇವೇಗೌಡ, ಹೆಚ್​ಡಿಡಿ ಕಂಬಿನಿ: ಕಮೇಗೌಡರ ನಿಧನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಕಲ್ಮನೆ ಕಮೇಗೌಡ ಅವರು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖ ಉಂಟಾಯಿತು. ತಮ್ಮ ಸ್ವಂತ ಹಣದಲ್ಲಿ ಕೆರೆ ಕಟ್ಟೆಗಳನ್ನು ನಿರ್ಮಾಣ ಮಾಡಿ ಅಂತರ್ಜಲ ವೃದ್ಧಿಗೆ ಕಾರಣರಾದ ಇವರ ಕೊಡುಗೆ ಅತ್ಯಮೂಲ್ಯವಾದದ್ದು.
ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಿಲಿ ಎಂದು ದೇವೇಗೌಡರು ಪ್ರಾರ್ಥಿಸಿದ್ದಾರೆ.

  • ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ 'ಆಧುನಿಕ ಭಗೀರಥ' ಕಲ್ಮನೆ ಕಾಮೇಗೌಡ ಅವರು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖ ಉಂಟಾಯಿತು. ತಮ್ಮ ಸ್ವಂತ ಹಣದಲ್ಲಿ ಕೆರೆ ಕಟ್ಟೆಗಳನ್ನು ನಿರ್ಮಾಣ ಮಾಡಿ ಅಂತರ್ಜಲ ವೃದ್ಧಿಗೆ ಕಾರಣರಾದ ಇವರ ಕೊಡುಗೆ ಅತ್ಯಮೂಲ್ಯವಾದದ್ದು.
    ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಿಲಿ ಎಂದು ಪ್ರಾರ್ಥಿಸುತ್ತೇನೆ pic.twitter.com/2okDKl1QOV

    — H D Devegowda (@H_D_Devegowda) October 17, 2022 " class="align-text-top noRightClick twitterSection" data=" ">

Last Updated : Oct 17, 2022, 12:28 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.