ETV Bharat / state

ಮಿಮ್ಸ್‌ ಆಸ್ಪತ್ರೆಯಲ್ಲಿ ರಿಮೋಟ್‌ ನಿಯಂತ್ರಿತ ಅತ್ಯಾಧುನಿಕ ತೀವ್ರ ನಿಗಾ ಘಟಕ ಚಾಲನೆ - ಮಿಮ್ಸ್‌ ಆಸ್ಪತ್ರೆ ಮಂಡ್ಯ

ವಿಜಯ್ ಕಿರಗಂದೂರು ನೇತೃತ್ವದ ಹೊಂಬಾಳೆ ಸಮೂಹವು, ಮಂಡ್ಯ ಜಿಲ್ಲೆಯಲ್ಲಿ ವೈದ್ಯಕೀಯ ಮೂಲ ಸೌಕರ್ಯಗಳನ್ನು ಒದಗಿಸಲು ಸುಮಾರು 2.35 ಕೋಟ ರೂ. ದೇಣಿಗೆ ನೀಡಿದೆ. ಅದರ ಅಡಿ ರಿಮೋಟ್‌ ನಿಯಂತ್ರಿತ ಅತ್ಯಾಧುನಿಕ ತೀವ್ರ ನಿಗಾ ಘಟಕ ನಿರ್ಮಿಸಲಾಗಿದೆ.

mandya
mandya
author img

By

Published : Jun 18, 2021, 5:26 PM IST

Updated : Jun 18, 2021, 10:50 PM IST

ಮಂಡ್ಯ: ಹೊಂಬಾಳೆ ಸಂಸ್ಥೆಯ ಆರ್ಥಿಕ ನೆರವಿನೊಂದಿಗೆ ಇಲ್ಲಿಯ ಮಿಮ್ಸ್‌ ಆಸ್ಪತ್ರೆಯಲ್ಲಿ ನಿರ್ಮಾಣ ಮಾಡಲಾಗಿರುವ ರಿಮೋಟ್‌ ನಿಯಂತ್ರಿತ ಅತ್ಯಾಧುನಿಕ ತೀವ್ರ ನಿಗಾ ಘಟಕಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಚಾಲನೆ ನೀಡಿದರು.

ಕಟ್ಟಡ ನಿರ್ಮಾಣ, ಸಿನಿಮಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿಜಯ್ ಕಿರಗಂದೂರು ಅವರ ನೇತೃತ್ವದ ಹೊಂಬಾಳೆ ಸಮೂಹವು, ಮಂಡ್ಯ ಜಿಲ್ಲೆಯಲ್ಲಿ ವೈದ್ಯಕೀಯ ಮೂಲಸೌಕರ್ಯಗಳನ್ನು ಒದಗಿಸಲು ಸುಮಾರು 2.35 ಕೋಟ ರೂ. ದೇಣಿಗೆ ನೀಡಿದೆ.

ಈ ನೆರವಿನ ಮೂಲಕ ಜಿಲ್ಲೆಯ ವೈದ್ಯಕೀಯ ಕಾಲೇಜಿನಲ್ಲಿ 55 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಐಸಿಯು ಸ್ಥಾಪಿಸಲಾಗಿದೆ. ಇನ್ನು ತಲಾ 90 ಲಕ್ಷ ರೂ. ವೆಚ್ಚದಲ್ಲಿ ಪಾಂಡವಪುರ ಮತ್ತು ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್ ಘಟಕಗಳನ್ನು ಅಳವಡಿಸಲಾಗುತ್ತಿದೆ.

ಮಿಮ್ಸ್‌ ಆಸ್ಪತ್ರೆಯಲ್ಲಿ ರಿಮೋಟ್‌ ನಿಯಂತ್ರಿತ ಅತ್ಯಾಧುನಿಕ ತೀವ್ರ ನಿಗಾ ಘಟಕ ಚಾಲನೆ

ಚತುಷ್ಮುಖಿ ಸಂಪರ್ಕ ಜಾಲ (ಫೋರ್‌ ವೇ ಕಮ್ಯುನಿಕೇಷನ್‌) ವ್ಯವಸ್ಥೆ ಹೊಂದಿರುವ ಐಸಿಯು, ಅಂತರ ರಾಷ್ಟ್ರೀಯ ಗುಣಮಟ್ಟದ ವೆಂಟಿಲೇಟರ್‌, ಮಾನಿಟರ್‌ಗಳನ್ನು ಹೊಂದಿದೆ. ರೋಗಿಯ ರಕ್ತದೊತ್ತಡ, ಮಧುಮೇಹ, ಆಮ್ಲಜನಕ ಸೇರಿ ಸಕಲ ಮಾಹಿತಿಯನ್ನು ಒಂದೇ ಮಾನಿಟರ್‌ನಲ್ಲಿ ತಿಳಿಯಬಹುದು. ವೈದ್ಯರು ರಿಮೋಟ್‌ ಮೂಲಕ ರೋಗಿಗಳ ಆರೋಗ್ಯ ಸ್ಥಿತಿ ಅರಿಯಬಹದು.

ಐಸಿಯು ಘಟಕ ಉದ್ಘಾಟಿಸಿ ಮಾತನಾಡಿದ ಅಶ್ವತ್ಥನಾರಾಯಣ, ಕೋವಿಡ್‌ ಪರಿಸ್ಥಿತಿ ನಿರ್ವಹಣೆಗೆ ಐಸಿಯು ಹಾಸಿಗೆಗಳ ಅವಶ್ಯಕತೆ ಬಹಳಷ್ಟಿತ್ತು. ಇದನ್ನು ಮನಗಂಡು ಹೊಂಬಾಳೆ ಸಂಸ್ಥೆ ಸುಸಜ್ಜಿತವಾದ ಐಸಿಯು ನೀಡಿರುವುದು ಸಂತೋಷದ ವಿಷಯ. ಎಲ್ಲರೂ ಈ ರೀತಿಯ ಸಹಾಯ ಮಾಡಬೇಕು ಎಂಬುದಕ್ಕೆ ವಿಜಯ್‌ ಕಿರಗಂದೂರು ಅವರು ಸ್ಫೂರ್ತಿಯಾಗಿದ್ದಾರೆ ಎಂದರು.

ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಿಗೆ ಹೆಚ್ಚಿನ ತಂತ್ರಜ್ಞಾನ, ಟೆಲಿ ವೈದ್ಯಕೀಯ ನೆರವು, ವರ್ಚುಯಲ್​ ತಪಾಸಣೆ ಸೌಲಭ್ಯ ಒದಗಿಸಲಾಗುವುದು. ಸಿಬ್ಬಂದಿ, ವೈದ್ಯರ ಸಂಖ್ಯೆ ಹೆಚ್ಚಳ ಮಾಡಲು ಕ್ರಮ ವಹಿಸಲಾಗುವುದು ಎಂದರು.

ನಾಯಕತ್ವ ಬದಲಾವಣೆ ಇಲ್ಲ:

ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಈಗಾಗಲೇ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಪಷ್ಟಪಡಿಸಿದ್ದಾರೆ. ಮತ್ತೆ ಅದೇ ವಿಚಾರ ಪ್ರಸ್ತಾಪ ಮಾಡುವುದು ಬೇಡ ಎಂದು ಹೇಳಿದರು.

ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಪಕ್ಷ ಸಂಘಟನೆಗಾಗಿ ರಾಜ್ಯಕ್ಕೆ ಬಂದಿದ್ದಾರೆ. ಪಕ್ಷದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಂತೆ ಸೂಚನೆ ಕೊಟ್ಟಿದ್ದಾರೆ. ಕೋವಿಡ್‌ ಹೆಚ್ಚಾಗಿದ್ದ ಕಾರಣ ಮೊದಲು ಬರಲು ಸಾಧ್ಯವಾಗಿರಲಿಲ್ಲ. ಈಗ ಕೋವಿಡ್‌ ನಿಯಂತ್ರಣಕ್ಕೆ ಬಂದಿರುವ ಕಾರಣ ಅವರು ರಾಜ್ಯಕ್ಕೆ ಭೇಟಿ ಕೊಟ್ಟಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

Last Updated : Jun 18, 2021, 10:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.