ಮಂಡ್ಯ: ಕ್ಯಾಂಟೀನ್‌ನಲ್ಲಿ ಊಟ ಮಾಡಿದ 20ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥಗೊಂಡ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿಯ ಸರವಿ ಕಾರ್ಖಾನೆಯಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ಕ್ಯಾಂಟೀನ್‌ನಲ್ಲಿ ಊಟ ಮಾಡಿದ ಮಹಿಳಾ ನೌಕರರು, ಸ್ವಲ್ಪ ಹೊತ್ತಿನಲ್ಲೇ ತಲೆ ಸುತ್ತು, ವಾಂತಿ-ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಮದ್ದೂರಿನ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ಕೊಡಿಸಲಾಯಿತು.
ಫುಡ್ ಪಾಯಿಸನ್ನಿಂದ ನೌಕರರು ಅಸ್ವಸ್ಥರಾಗಿರೋ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಕ್ಯಾಂಟೀನ್ ಪರಿಶೀಲನೆ ನಡೆಸಿದ್ದಾರೆ.