ಮಂಡ್ಯ: ಕುಟುಂಬ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿಯಲ್ಲಿ ನಡೆದಿದೆ.
ಘಟನೆಯಲ್ಲಿ ಪುನೀತ್(2) ಎಂಬ ಮಗು ಸಾವಿಗೀಡಾದಗಿದ್ದು, ಮತ್ತೊಬ್ಬ ಪುತ್ರ ಲೋಹಿತ್ ಹಾಗೂ ತಾಯಿ ಸೌಜನ್ಯ ಮಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳಗ್ಗೆ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಎರಡನೇ ಮಗು ಸಾವುಗೀಡಾಗಿದ್ದು, ತಾಯಿ ಮತ್ತು ಮತ್ತೊಂದು ಮಗು ಅಸ್ವಸ್ಥರಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಮಳವಳ್ಳಿ ಡಿವೈಎಸ್‌ಪಿ ಪೃಥ್ವಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.