ETV Bharat / state

ಬಿಜೆಪಿ ಸೇರುವ ಬಗ್ಗೆ ಎಲ್ಲೂ ಹೇಳಿಲ್ಲ, ಜನಾಭಿಪ್ರಾಯ ಸಂಗ್ರಹಿಸಿ ನಿರ್ಧಾರ: ಸುಮಲತಾ

ಬಿಜೆಪಿ ಸೇರ್ಪಡೆ ಬಗ್ಗೆ ಎದ್ದಿರುವ ಸುದ್ದಿಗೆ ಸ್ಪಷ್ಟನೆ ನೀಡಿರುವ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್​, ನಾನು ಬಿಜೆಪಿ ಸೇರುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಈ ಬಗ್ಗೆ ಜನಾಭಿಪ್ರಾಯ ಸಂಗ್ರಹ ಮಾಡುತ್ತಿದ್ದೇನೆ. ಆ ಬಳಿಕ ನಿರ್ಧರಿಸಲಾಗುವುದು ಎಂದರು.

mp-sumalata
ಸಂಸದೆ ಸುಮಲತಾ
author img

By

Published : Apr 28, 2022, 4:37 PM IST

Updated : Apr 28, 2022, 5:04 PM IST

ಮಂಡ್ಯ: ಬಿಜೆಪಿ ಸೇರುವ ಬಗ್ಗೆ ಎಲ್ಲಿಯೂ ನಾನು ಹೇಳಿಕೆ ನೀಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ. ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಗೆ ಮದ್ದೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಮುಖಂಡರನ್ನು ಭೇಟಿಯಾದರೆ ಅಭಿವೃದ್ಧಿಯ ವಿಚಾರವಾಗಿ ಅಷ್ಟೇ. ಅವರ ಜೊತೆ ಅಭಿವೃದ್ಧಿ ವಿಚಾರವನ್ನಷ್ಟೇ ಮಾತನಾಡಿದ್ದೇನೆ ಎಂದು ತಿಳಿಸಿದರು.

ಬಿಜೆಪಿ ಸೇರುವ ಬಗ್ಗೆ ಎಲ್ಲೂ ಹೇಳಿಲ್ಲ, ಜನಾಭಿಪ್ರಾಯ ಸಂಗ್ರಹಿಸಿ ನಿರ್ಧಾರ: ಸುಮಲತಾ

ಈ ಹಿಂದೆ ಮುಖಂಡರು ಸಂಸದರ ನಿಧಿ ಬಗ್ಗೆ ಕೇಳಿದ್ದರು. ಆದರೆ, ಕಳೆದ 2 ವರ್ಷಗಳಿಂದ ಸಂಸದರ ನಿಧಿ ಬಂದಿರಲಿಲ್ಲ. ಈಗ ಸಂಸದರ ನಿಧಿ ಬಿಡುಗಡೆಯಾದ ಹಿನ್ನೆಲೆಯಲ್ಲಿ ಆ ಬಗ್ಗೆ ತಿಳಿಸಲು ಸಭೆ ಕರೆದಿದ್ದೇನೆಯೇ ಹೊರತು ಬಿಜೆಪಿ ಸೇರುವ ಬಗ್ಗೆ ಅಲ್ಲ. ಸಚಿವ ಅಶ್ವತ್ಥ್ ನಾರಾಯಣ್ ಪಕ್ಷಕ್ಕೆ ಬಂದರೆ ಸ್ವಾಗತ ಎಂದಿದ್ದಾರೆ. ನನಗೆ ಈಗ ಸದ್ಯಕ್ಕೆ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ಈಗ ಚುನಾವಣೆಯೂ ಇಲ್ಲ, ಅದರ ಪ್ರಸ್ತಾಪವೂ ಬೇಡ. ಪಕ್ಷ ಸೇರ್ಪಡೆ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ. ಜನರು ಏನು ಹೇಳುತ್ತಾರೋ, ಅದನ್ನು ಮಾಡುವೆ. ಅದನ್ನು ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.

ಬೆಂಬಲಿಗರು ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ನನ್ನ ಬೆಂಬಲಿಗರು ಬಿಜೆಪಿ ಸೇರ್ಪಡೆ ಬಗ್ಗೆ ನಾನು ಏನು ಹೇಳುವುದಿಲ್ಲ. ಎಲ್ಲರೂ ಸ್ವತಂತ್ರರು ಯಾವ ಪಕ್ಷಕ್ಕಾದರೂ ಸೇರಬಹುದು. ನಾನು ಸ್ಪರ್ಧಿಸಿದ್ದ ವೇಳೆ ಚುನಾವಣೆಯಲ್ಲಿ ಎಲ್ಲಾ ಪಕ್ಷದವರೂ ದುಡಿದಿದ್ದಾರೆ. ಪುತ್ರ ಅಭಿಷೇಕ್ ಚುನಾವಣೆಗೆ ಸ್ಪರ್ಧಿಸುತ್ತಾನೋ ಇಲ್ಲವೋ ಎನ್ನುವುದು ಆತನಿಗೆ ಬಿಟ್ಟ ವಿಚಾರ. ಇದು ಆತನ ವೈಯಕ್ತಿಕ ನಿಲುವು ಎಂದರು.

ಇದನ್ನೂ ಓದಿ: ಬಿಜೆಪಿ ಸೇರಲು ಸುಮಲತಾಗೆ ಮಾಜಿ ಸಚಿವ ಯೋಗೇಶ್ವರ್​ ಆಹ್ವಾನ

Last Updated : Apr 28, 2022, 5:04 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.