ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯ ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ ನಗರಗಳಿಗೆ ಪೈಪ್‌ಲೈನ್ ಮೂಲಕ ಗ್ಯಾಸ್ ಸಂಪರ್ಕಕ್ಕೆ ಸಂಸದೆ ಸುಮಲತಾ ಅಂಬರೀಶ್ ಮನವಿ ಸಲ್ಲಿಸಿದ್ದಾರೆ.
ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಗ್ಯಾಸ್ ಸಂಗ್ರಹಣ ಘಟಕದ ಮೂಲಕ ಅನಿಲ ಪೂರೈಕೆ ಮಾಡುವಂತೆ, ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಕೇಂದ್ರ ಸರ್ಕಾರ ಸಂಸದರ ಬೇಡಿಕೆಗೆ ಒಪ್ಪಿಗೆ ಸೂಚಿಸಿದರೆ ಎನ್ಎಚ್ 275ರಲ್ಲಿ ಬರುವ ಎಲ್ಲಾ ನಗರ ಪ್ರದೇಶಗಳಿಗೆ, ಕೈಗಾರಿಕಾ ಪ್ರದೇಶಗಳಿಗೆ ಪೈಪ್‌ಲೈನ್ ಮೂಲಕ ಗ್ಯಾಸ್ ಸಂಪರ್ಕ ಸಿಗಲಿದೆ.