ಮಂಡ್ಯ : ಕೇಂದ್ರ ಸರ್ಕಾರದ ಯೋಜನೆಯಾದ ಡಿಜಿಟಲ್ ಇಂಡಿಯಾ ಸಂಚಾರಿ ವಾಹನಕ್ಕೆ ಚಾಲನೆ ಸಿಕ್ಕಿದೆ. ಸಂಸದೆ ಸುಮಲತಾ ಅಂಬರೀಶ್ ಶ್ರೀರಂಗಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಈ ವಾಹನಕ್ಕೆ ಹಸಿರು ಬಾವುಟ ಬೀಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಯಿಂದ ಗ್ರಾಮೀಣ ಭಾಗದ ಜನರಿಗೆ ಅನುಕೂಡಲ ಆಗಲಿದೆ.
ಈ ವಾಹನ ಗ್ರಾಮಗಳಿಗೆ ಬಂದ ನಂತರ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಹಣಿ ಪತ್ರ ಸೇರಿದಂತೆ ಹಲವು ಸಾಮಾಜಿಕ ಭದ್ರತೆಯ ವೇತನಗಳ ತಿದ್ದುಪಡಿ ಮಾಡಿಸಿಕೊಳ್ಳಬಹುದು. ಇದು ಗ್ರಾಮೀಣ ಪ್ರದೇಶದ ಜನರು ಕಚೇರಿಗೆ ಅಲೆಯುವುದನ್ನು ತಪ್ಪಿಸುತ್ತದೆ ಎಂದರು.
ಇದನ್ನೂ ಓದಿ: ಚನ್ನಪಟ್ಟಣ: ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ನಾಪತ್ತೆ
ಶ್ರೀರಂಗಪಟ್ಟಣ ಪ್ರವಾಸಿ ತಾಣಗಳ ಅಭಿವೃದ್ದಿ ಕುರಿತು ಮುಖ್ಯಮತ್ರಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ಇನ್ನಷ್ಟು ಹಣ ಬಿಡುಗಡೆಗೆ ಒತ್ತಾಯ ಮಾಡಿದ್ದೇನೆ. ಪ್ಯಾಕೇಜ್ ಮೂಲಕ ನೀಡಲು ಸಿಎಂ ಭರವಸೆ ನೀಡಿದ್ದಾರೆ ಎಂದರು.