ಮಂಡ್ಯ: ಜಿಲ್ಲೆಯ ಅಕ್ರಮ ಗಣಿಗಾರಿಕೆ ವಿಚಾರ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ನಡುವೆ ಕೆಲವು ದಿನಗಳ ಹಿಂದೆಯಷ್ಟೇ ದೊಡ್ಡ ಸಂಘರ್ಷಕ್ಕೆ ಕಾರಣವಾಗಿತ್ತು.
ಇದರ ಬೆನ್ನಲ್ಲೇ ಸಂಸದೆ ಸುಮಲತಾ ಅಂಬಿ ಕೆಆರ್ಎಸ್ ಅಣೆಕಟ್ಟು ಹಾಗೂ ಅಕ್ರಮ ಗಣಿಗಾರಿಕೆ ಜಾಗಕ್ಕೆ ಭೇಟಿ ನೀಡಿದ್ದರು. ಅಲ್ಲದೇ ಅಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಸುಮಲತಾ ಧ್ವನಿ ಎತ್ತಿದ್ದರು.
ಇದೀಗ ಮಂಡ್ಯ ಅಕ್ರಮ ಗಣಿಗಾರಿಕೆ ವಿಚಾರ ದೆಹಲಿಯಲ್ಲಿ ಸದ್ದು ಮಾಡುತ್ತಿದೆ. ಈ ವಿಚಾರವಾಗಿ ದೆಹಲಿಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಸಂಸದೆ ಸುಮಲತಾ ಅಂಬರೀಶ್ ಭೇಟಿ ಮಾಡಿ, ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಇದರಿಂದ ಮೈಸೂರು ಕೆಆರ್ಎಸ್ ಅಣೆಕಟ್ಟು, ರೈತರು, ಪರಿಸರ ಹಾಗೂ ಅರಣ್ಯಗಳಿಗೆ ಆಗುತ್ತಿರುವ ಹಾನಿಯನ್ನು ಸುಮಲತಾ ಅಂಬರೀಶ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಗಮನಕ್ಕೆ ತಂದಿದ್ದಾರೆ.
ಈ ಅಕ್ರಮ ಗಣಿಗಾರಿಕೆ ವಿಚಾರವಾಗಿ ಉನ್ನತ ಮಟ್ಟದ ಸಿಬಿಐ ತನಿಖೆಗೆ ಆಗುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
-
ಮಾನ್ಯ ಉಪರಾಷ್ಟ್ರಪತಿ ಶ್ರೀ
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 23, 2021 " class="align-text-top noRightClick twitterSection" data="
ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಕೆ.ಆರ್.ಎಸ್ ಅಣೆಕಟ್ಟು, ರೈತರು ಪರಿಸರ ಹಾಗೂ ಅರಣ್ಯಗಳಿಗೆ ಆಗುತ್ತಿರುವ ಹಾನಿಯನ್ನು ವಿವರಿಸಿ ಸಿ.ಬಿ.ಐ ರೀತಿಯ ಕೇಂದ್ರ ದಳದಿಂದ ಉನ್ನತ ಮಟ್ಟದ ತನಿಖೆಗೆ ಅವರ ನೆರವು ಕೇಳಿದ್ದೇನೆ
#SaveKRSdam #stopillegalmining pic.twitter.com/r2LWtDwvdt
">ಮಾನ್ಯ ಉಪರಾಷ್ಟ್ರಪತಿ ಶ್ರೀ
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 23, 2021
ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಕೆ.ಆರ್.ಎಸ್ ಅಣೆಕಟ್ಟು, ರೈತರು ಪರಿಸರ ಹಾಗೂ ಅರಣ್ಯಗಳಿಗೆ ಆಗುತ್ತಿರುವ ಹಾನಿಯನ್ನು ವಿವರಿಸಿ ಸಿ.ಬಿ.ಐ ರೀತಿಯ ಕೇಂದ್ರ ದಳದಿಂದ ಉನ್ನತ ಮಟ್ಟದ ತನಿಖೆಗೆ ಅವರ ನೆರವು ಕೇಳಿದ್ದೇನೆ
#SaveKRSdam #stopillegalmining pic.twitter.com/r2LWtDwvdtಮಾನ್ಯ ಉಪರಾಷ್ಟ್ರಪತಿ ಶ್ರೀ
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) July 23, 2021
ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಕೆ.ಆರ್.ಎಸ್ ಅಣೆಕಟ್ಟು, ರೈತರು ಪರಿಸರ ಹಾಗೂ ಅರಣ್ಯಗಳಿಗೆ ಆಗುತ್ತಿರುವ ಹಾನಿಯನ್ನು ವಿವರಿಸಿ ಸಿ.ಬಿ.ಐ ರೀತಿಯ ಕೇಂದ್ರ ದಳದಿಂದ ಉನ್ನತ ಮಟ್ಟದ ತನಿಖೆಗೆ ಅವರ ನೆರವು ಕೇಳಿದ್ದೇನೆ
#SaveKRSdam #stopillegalmining pic.twitter.com/r2LWtDwvdt
ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ.. ರಾಜ್ಯಪಾಲರನ್ನ ಭೇಟಿಯಾದ ಸಂಸದೆ ಸುಮಲತಾ..