ಮಂಡ್ಯ : ನಗರದಲ್ಲಿ ಸಂಸದೆ ಸುಮಲತಾ ಬೆಂಬಲಿಗರು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ನಡೆಸಿ ಪ್ರತಿಕೃತಿ ದಹಿಸಿ ಆಕ್ರೋಶ ಹೊರ ಹಾಕಿದರು.
ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಸುಮಲತಾ ಅಂಬರೀಶ್ ವಿರುದ್ಧದ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಸಂಸದೆ ಸುಮಲತಾ ಬೆಂಬಲಿಗರು, ಕುಮಾರಸ್ವಾಮಿ ವಿರುದ್ಧ ಧಿಕ್ಕಾರ ಕೂಗಿದರಲ್ಲದೇ, ಕುಮಾರಸ್ವಾಮಿ ಅವರಿಗೆ ಎರಡು ನಾಲಿಗೆ ಇದೆ ಎಂದು ವ್ಯಂಗ್ಯವಾಡಿದರು.
ಕುಮಾರಸ್ವಾಮಿಯವರಿಗೆ ಎರಡು ನಾಲಿಗೆ ಇರುವ ಭಾವಚಿತ್ರ ಹಿಡಿದು ವಿನೂತನ ಪ್ರತಿಭಟನೆ ಮಾಡಿದರಲ್ಲದೇ, ಮೇಣದ ಭತ್ತಿ ಹಚ್ಚಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಹೆಚ್ ಡಿ ಕುಮಾರಸ್ವಾಮಿ ಅವರೇ ಪಿತೃ ಎಂದು ಆರೋಪಿಸಿದರಲ್ಲದೇ, ಮಹಿಳೆಯರಿಗೆ ಕುಮಾರಸ್ವಾಮಿ ಅಪಮಾನ ಮಾಡಿದ್ದಾರೆ. ತಕ್ಷಣವೇ ಕ್ಷಮೆ ಕೇಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಇದನ್ನೂ ಓದಿ : ಅವರು ಎಂಎಲ್ಎ ಆದ್ರೆ, ನಾನು ಎಂಪಿ: ಹೆಚ್ಡಿಕೆಗೆ ಸುಮಲತಾ ಟಾಂಗ್