ETV Bharat / state

ಕೆಆರ್​ಎಸ್​ ಡ್ಯಾಂ ಸುತ್ತಮುತ್ತ ಗಣಿಗಾರಿಕೆ ನಿಷೇಧ: ಹೈಕೋರ್ಟ್ ಆದೇಶ ಸ್ವಾಗತಿಸಿದ ಸಂಸದೆ ಸುಮಲತಾ, ಹೋರಾಟಗಾರರು

author img

By ETV Bharat Karnataka Team

Published : Jan 8, 2024, 7:24 PM IST

Updated : Jan 8, 2024, 8:11 PM IST

ಹಿಂದಿನಿಂದಲೂ ಕೆಆರ್​ಎಸ್​ ಡ್ಯಾಂ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ನಡೆಯುತ್ತಿದ್ದ ಗಣಿಗಾರಿಕೆಗೆ ಹೈಕೋರ್ಟ್ ನಿರ್ಬಂಧ ಹೇರಿ ಆದೇಶ ಹೊರಡಿಸಿರುವುದನ್ನು ಜಿಲ್ಲೆಯ ಸಂಸದೆ ಸುಮಲತಾ ಅಂಬರೀಶ್​ ಮತ್ತು ಹೋರಾಟಗಾರರು ಸ್ವಾಗತಿಸಿದ್ದಾರೆ.

ಸಂಸದೆ ಸುಮಲತಾ ಅಂಬರೀಶ್
ಸಂಸದೆ ಸುಮಲತಾ ಅಂಬರೀಶ್
ಹೈಕೋರ್ಟ್ ಆದೇಶ ಸ್ವಾಗತಿಸಿದ ಹೋರಾಟಗಾರರು

ಮಂಡ್ಯ : ಕೆಆರ್​ಎಸ್ ಅಣೆಕಟ್ಟೆಯ 30 ಕಿಲೋ ಮೀಟರ್​ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿರುವುದನ್ನು ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ ಸ್ವಾಗತಿಸಿದ್ದಾರೆ. ಜೊತೆಗೆ ಆರ್​ಟಿಐ ಕಾರ್ಯಕರ್ತ ರವೀಂದ್ರ ಮತ್ತು ಹೋರಾಟಗಾರ್ತಿ ಸುನಂದಾಜಯರಾಂ ಅವರು ಸಹ ನ್ಯಾಯಾಲಯದ ಆದೇಶವನ್ನು ಗೌರವಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿರುವ ಸುಮಲತಾ ಅವರು, ಕೆಆರ್​ಎಸ್ ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಬೇಕೆಂಬುದು ನನ್ನ ಹೋರಾಟವಾಗಿತ್ತು. ಇಂದು ನನ್ನ ಹೋರಾಟಕ್ಕೆ ಹೈಕೋರ್ಟ್ ಆದೇಶದಿಂದ ಮತ್ತಷ್ಟು ಬಲ ಬಂದಿದೆ. ನಾವೆಲ್ಲ ಕೆಆರ್​ಎಸ್ ಉಳಿಸಿಕೊಳ್ಳಬೇಕಿದೆ. ಇದೀಗ ಹೈಕೋರ್ಟ್ ಗಣಿಗಾರಿಕೆ ನಿಷೇಧಿಸಿ ಆದೇಶ ಮಾಡಿದೆ. ಮಹತ್ವದ ಆದೇಶ‌ ನೀಡಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಪಿ ಬಿ ವರಾಳೆ, ಕೃಷ್ಣ ಎಸ್ ದೀಕ್ಷಿತ್ ಅವರ ಪೀಠಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

ದಶಕಗಳಿಂದ ಕೆಆರ್​ಎಸ್​ ಡ್ಯಾಂಗೆ ಅಪಾಯವಾಗುತ್ತದೆ, ಕಾನೂನು ಬಾಹಿರವಾದ ಗಣಿಗಾರಿಕೆ ಮಾಡುವುದನ್ನು ನಿಲ್ಲಿಸಬೇಕು. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಮ್ಮ ಕರ್ನಾಟಕ ರಾಜ್ಯ ರೈತ ಸಂಘಟನೆ ಮತ್ತು ಹಲವು ಪ್ರಗತಿಪರ ಸಂಘಟನೆಗಳಿಂದ ಹೋರಾಟ ಮಾಡಿದ್ದೆವು. ಇವತ್ತು ಈ ವಿಚಾರವಾಗಿ ಹೈಕೋರ್ಟ್​ ಉತ್ತಮವಾದ ಆದೇಶವನ್ನು ಹೊರಡಿಸಿದೆ. ಈ ಆದೇಶವನ್ನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಹೋರಾಟಗಾರ್ತಿ ಸುನಂದಾ ಜಯರಾಂ ತಿಳಿಸಿದರು.

ಹೈಕೋರ್ಟ್​ ಹೇಳಿದ್ದೇನು? : ಕೆಆರ್​​​​ಎಸ್ ಅಣೆಕಟ್ಟೆಯ ಸುತ್ತಮುತ್ತ 30 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ನೀಡಿದೆ. ಕೆಆರ್​​​​ಎಸ್ ಡ್ಯಾಂ ಬಳಿ ಹಲವು ಬಾರಿ ದೊಡ್ಡ ಶಬ್ದ ಕೇಳಿಬಂದಿದೆ. ಕೃಷ್ಣರಾಜಸಾಗರ ಅಣೆಕಟ್ಟು ಈಗಾಗಲೇ ಸಂಕಷ್ಟದಲ್ಲಿದೆ. ಅಣೆಕಟ್ಟೆಯ ಬಳಿ ಗಣಿಗಾರಿಕೆ ನಡೆಸಿದರೆ ಗಂಭೀರ ಪರಿಣಾಮವಾಗಲಿದೆ. ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಐತಿಹಾಸಿಕ ಮೌಲ್ಯವಿದೆ. ಮೈಸೂರು ಮಹಾರಾಜರು, ಸರ್ ಎಂ. ವಿಶ್ವೇಶ್ವರಯ್ಯರ ಕೊಡುಗೆ ಬಹಳಷ್ಟಿದೆ ಎಂದು ನ್ಯಾಯಪೀಠ ಹೇಳಿದೆ.

ಕೆಆರ್​​​​ಎಸ್ ಡ್ಯಾಂ ನಿರ್ಮಾಣಕ್ಕೆ ಜನರು ರಕ್ತ, ಬೆವರು ಹರಿಸಿದ್ದಾರೆ. ತೀ. ತಾ. ಶರ್ಮರ ಸರ್. ಎಂ. ವಿಶ್ವೇಶ್ವರಯ್ಯ ಕುರಿತ ಪುಸ್ತಕದಲ್ಲಿ ಈ ಬಗ್ಗೆ ಉಲ್ಲೇಖವಿದೆ. ಕೆಆರ್​​​​ಎಸ್​ಗೆ ಧಕ್ಕೆಯಾಗುವ ಯಾವುದೇ ಚಟುವಟಿಕೆಗೆ ಅವಕಾಶವಿಲ್ಲ. ಮೂರು ರಾಜ್ಯಗಳು ಕಾವೇರಿ ನೀರಿಗಾಗಿ ಹೋರಾಡುತ್ತಿವೆ. ಆದರೆ ಕೆಆರ್​​​​ಎಸ್ ಅಣೆಕಟ್ಟೆ ಸಂರಕ್ಷಣೆಗೆ ಪ್ರಯತ್ನಿಸುತ್ತಿಲ್ಲ. ಅಣೆಕಟ್ಟೆಗೆ ತೊಂದರೆಯಾದರೆ ಆಗುವ ಅನಾಹುತಗಳ ಅರಿವಿದೆಯೇ? ಅಣೆಕಟ್ಟೆಗೆ ತೊಂದರೆಯಾದರೆ ಇಡೀ ರಾಜ್ಯಕ್ಕೇ ಗಂಭೀರ ಆಪತ್ತು ಬರಲಿದೆ. ಹೀಗಾಗಿ ಕೆಆರ್​​​​ಎಸ್ ಅಣೆಕಟ್ಟೆ ಬಳಿ ಗಣಿಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.

ಇದನ್ನೂ ಓದಿ : ಗಣಿಗಾರಿಕೆಯಿಂದ ಕೆಆರ್​ಎಸ್​ಗೆ ಹಾನಿ: ಎಸ್​​​ಸಿಡಿಸಿಯನ್ನು ಪ್ರತಿವಾದಿಯನ್ನಾಗಿಸಲು ಹೈಕೋರ್ಟ್ ಸೂಚನೆ

Last Updated : Jan 8, 2024, 8:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.