ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮುಂಡುಗದೊರೆ ಗ್ರಾಮದಲ್ಲಿ 17 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇಡೀ ಗ್ರಾಮವನ್ನೇ ಸೀಲ್ ಡೌನ್ ಮಾಡಲಾಗಿದೆ.
ಮುಂಡುಗದೊರೆ ಗ್ರಾಮ ಪಂಚಾಯತ್ ಸಂಪೂರ್ಣ ಊರನ್ನೇ ಸೀಲ್ ಡೌನ್ ಮಾಡಿದ್ದು, ಊರಿನಿಂದ ಯಾರೂ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಗ್ರಾಮದಲ್ಲಿ ಇನ್ನೂ ಹಲವು ಮಂದಿಗೆ ಸೋಂಕು ತಗುಲುವ ಸಾಧ್ಯತೆ ಇದೆ. ಹೀಗಾಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
ಓದಿ: ತುಮಕೂರಿನಲ್ಲಿ 80ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ವಕ್ಕರಿಸಿದ ಕೋವಿಡ್
ಹಲವು ಮಂದಿಗೆ ಸೋಂಕು ತಗುಲಿರುವುದರಿಂದ ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದು, ಜಿಲ್ಲಾಡಳಿತ ಎಲ್ಲಾ ರೀತಿಯ ಅಗತ್ಯ ಸೇವೆಗಳನ್ನು ಕಲ್ಪಿಸಲು ತಾಲೂಕು ಆಡಳಿತಕ್ಕೆ ಸೂಚಿಸಿದೆ.