ETV Bharat / state

ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ.. ಜಮೀನಿನಲ್ಲಿ ಮೃತದೇಹ ಎಸೆದು ಪರಾರಿಯಾದ ದುಷ್ಕರ್ಮಿಗಳು! - ಜಮೀನಿನಲ್ಲಿ ಮೃತದೇಹ ಎಸೆದು ಪರಾರಿಯಾದ ದುಷ್ಕರ್ಮಿಗಳು

ಮಂಡ್ಯದಲ್ಲಿ ಬರ್ಬರ ಕೊಲೆಯೊಂದು ನಡೆದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಕೊಲೆಯಾಗಿರುವ ಯುವಕನ ಶರೀರವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆ ರವಾನಿಸಿದ್ದಾರೆ.

murder in mandya
murder in mandya
author img

By

Published : Aug 10, 2021, 10:40 PM IST

ಮಂಡ್ಯ: ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಟ್ಟುನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಟ್ಟುನಹಳ್ಳಿ ಗ್ರಾಮದ ಮಹದೇವು ಎಂಬುವವರ ಜಮೀನಿನಲ್ಲಿ ಸುಮಾರು 35 ವರ್ಷದ ಯುವಕನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಮೃತದೇಹ ಎಸೆದು ಪರಾರಿಯಾಗಿದ್ದಾರೆ.

ಆದರೆ ಯುವಕ ಯಾರು ಎಲ್ಲಿಯವನು ಎಂದು ಇನ್ನೂ ಪತ್ತೆಯಾಗಿಲ್ಲ. ಸದ್ಯ ಎಎಸ್‌ಪಿ ಧನಂಜಯ್ ಹಾಗೂ ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಕೊಲೆಯಾಗಿರುವ ಯುವಕನ ಶರೀರವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.