ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ವೈನ್ ಸ್ಟೋರ್ ಬಳಿ ಕಳೆದ ರಾತ್ರಿ ಯುವಕನೋರ್ವನನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಪ್ರಕರಣ ನಡೆದಿದೆ. ಬೆಳಗೊಳದ ಸೀಬಯ್ಯನ ಮಂಟಿ ನಿವಾಸಿ ರವಿ(22) ಕೊಲೆಯಾದ ಯುವಕ. ಈತ ವೈನ್ ಸ್ಟೋರ್ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ವೈನ್ ಸ್ಟೋರ್ ಮುಂದೆಯೇ ತಲೆ ಭಾಗವನ್ನು ಕೊಟ್ಟಿ, ಮಚ್ಚಿನಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಶರತ್ ಎಂಬಾತ ಕೊಲೆ ಮಾಡಿದ್ದಾನೆ ಎನ್ನಲಾಗ್ತಿದೆ. ಶರತ್ ಅತ್ತೆ ಜೊತೆ ರವಿ ಅಕ್ರಮ ಸಂಬಂಧ ಹೊಂದಿದ್ದ ಎಂಬ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗ ಪೊಲೀಸರಿಂದ ಸ್ಪೆಷಲ್ ಡ್ರೈವ್: ಮಾರಕಾಸ್ತ್ರ ಪತ್ತೆ