ETV Bharat / state

ಮಂಡ್ಯ: ಕೋವಿಡ್ ಕೇರ್ ಸೆಂಟರ್​ನಲ್ಲಿ ಸುಗಮ ಸಂಗೀತ ಕಾರ್ಯಕ್ರಮ

ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಬ್ಯಾಟರಾಯಗೌಡ "ಒಳಿತು ಮಾಡು ಮನುಷ್ಯ ನೀ ಇರೋದು ಮೂರೇ ದಿವಸ" ಹಾಡು ಹಾಡುವ ಮೂಲಕ ಕೋವಿಡ್ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಿದರು.

author img

By

Published : May 19, 2021, 1:09 PM IST

ಕೋವಿಡ್ ಕೇರ್ ಸೆಂಟರ್​ನಲ್ಲಿ ಸುಗಮ ಸಂಗೀತ ಕಾರ್ಯಕ್ರಮ

ಮಂಡ್ಯ: ಕೆ.ಆರ್.ಪೇಟೆ ತಾಲೂಕು ಆಡಳಿತದ ವತಿಯಿಂದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಸುಗಮ ಸಂಗೀತ ಕಾರ್ಯಕ್ರಮ ಆಯೋಜಿಸಿ ಸೋಂಕಿತರಿಗೆ ಪೊಲೀಸ್ ಅಧಿಕಾರಿ ಆತ್ಮಸ್ಥೈರ್ಯ ತುಂಬಿದ್ದಾರೆ.

ಕೆ.ಆರ್.ಪೇಟೆ ತಾಲೂಕಿನ ಹೊಸ ಹೊಳಲು ಗ್ರಾಮದ ಕೋವಿಡ್ ಕೇರ್ ಸೆಂಟರ್​ನಲ್ಲಿ ಸುಗಮ ಸಂಗೀತ ಆಯೋಜಿಸುವ ಮೂಲಕ ವಿಭಿನ್ನ ಪ್ರಯತ್ನ ಮಾಡಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಬ್ಯಾಟರಾಯಗೌಡ "ಒಳಿತು ಮಾಡು ಮನುಷ್ಯ ನೀ ಇರೋದು ಮೂರೇ ದಿವಸ" ಹಾಡು ಹಾಡುವ ಮೂಲಕ ಕೋವಿಡ್ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಿ ಸೋಂಕಿತರ ಮನರಂಜಿಸಿದ್ದಾರೆ.

ರವಿಕುಮಾರ್ ನೇತೃತ್ವದಲ್ಲಿ ಸುಗಮ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸೋಂಕಿತರಿಗೆ ಮನರಂಜನೆ ನೀಡುವ ಮೂಲಕ ಬೇಗನೆ ಗುಣಮುಖರಾಗುವಂತೆ ಹಾರೈಸಿದರು. ಸಂಗೀತ ಕೇಳಿ ಸೋಂಕಿತರು ಸಂತೋಷಪಟ್ಟರೆ, ಇತ್ತ ಪಿಎಸ್‌ಐಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.