ETV Bharat / state

ಮಾರ್ಚ್ 12ಕ್ಕೆ ಪ್ರಧಾನಿ ಮೋದಿ ಮಂಡ್ಯಕ್ಕೆ ಭೇಟಿ.. ಮೈಸೂರು ಬೆಂಗಳೂರು ಹೆದ್ದಾರಿ ಸಂಚಾರ ರದ್ದು: ಮಾರ್ಗ ಬದಲಾವಣೆಗೆ ಡಿಸಿ ಆದೇಶ

ಮಾರ್ಚ್​ 12ರಂದು ಪ್ರಧಾನಿ ನರೇಂದ್ರ ಮೋದಿಯವರು ಮಂಡ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಮಾರ್ಗ ಬದಲಾವಣೆ ಮಾಡಿ ಡಿಸಿ ಡಾ ಹೆಚ್​ ಎನ್ ಗೋಪಾಲಕೃಷ್ಣ ಆದೇಶ ಹೊರಡಿಸಿದ್ದಾರೆ.

ಮೈಸೂರು ಬೆಂಗಳೂರು ಹೆದ್ದಾರಿ
ಮೈಸೂರು ಬೆಂಗಳೂರು ಹೆದ್ದಾರಿ
author img

By

Published : Mar 8, 2023, 7:36 PM IST

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಮಾರ್ಚ್​ 12 ರಂದು ಮಂಡ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಮಾರ್ಗ ಬದಲಾವಣೆ ಮಾಡಿ ಮಂಡ್ಯ ಜಿಲ್ಲಾಧಿಕಾರಿ ಡಾ ಹೆಚ್ ಎನ್ ಗೋಪಾಲಕೃಷ್ಣ ಆದೇಶ ಹೊರಡಿಸಿದ್ದಾರೆ. ಮಾರ್ಚ್​ 12 ರಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಬೆಂಗಳೂರು ಮೈಸೂರು ಮಾರ್ಗ ಬದಲಾವಣೆ ಮಾಡಿದ್ದಾರೆ.

1. ಮೈಸೂರು ನಗರದಿಂದ ಬೆಂಗಳೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳನ್ನು ಮೈಸೂರು - ಬನ್ನೂರು - ಕಿರುಗಾವಲು - ಮಳವಳ್ಳಿ - ಹಲಗೂರು - ಕನಕಪುರ – ಬೆ೦ಗಳೂರು ಮಾರ್ಗವಾಗಿ ಸಂಚರಿಸಲು ಅನುವು ಮಾಡಲು ಕೋರಲಾಗಿದೆ.

2. ಮೈಸೂರು ನಗರದಿಂದ ತುಮಕೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳನ್ನು ಮೈಸೂರು - ಶ್ರೀರಂಗಪಟ್ಟಣ - ಪಾಂಡವಪುರ - ನಾಗಮಂಗಲ – ಬೆಳ್ಳೂರು ಕ್ರಾಸ್ – ತುಮಕೂರು ಮಾರ್ಗವಾಗಿ ಸಂಚರಿಸಲು ಅನುವು ಮಾಡಲು ಕೋರಲಾಗಿದೆ.

3. ತುಮಕೂರಿನಿಂದ ಮೈಸೂರಿಗೆ ಮದ್ದೂರು ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳನ್ನು ತುಮಕೂರು - ಬೆಳ್ಳೂರು ಕ್ರಾಸ್- ನಾಗಮಂಗಲ-ಪಾ೦ಡವಪುರ-ಶ್ರೀರಂಗಪಟ್ಟಣ- ಮೈಸೂರು ಮಾರ್ಗವಾಗಿ ಸಂಚರಿಸಲು ಅನುವು ಮಾಡಲಾಗಿದೆ.

4. ಬೆಂಗಳೂರಿನಿಂದ ಮೈಸೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳನ್ನು ಬೆಂಗಳೂರು ಚನ್ನಪಟ್ಟಣ - ಹಲಗೂರು - ಮಳವಳ್ಳಿ - ಕಿರುಗಾವಲು - ಬನ್ನೂರು ಮೈಸೂರು. ಮಾರ್ಗವಾಗಿ ಸಂಚರಿಸಲು. ಅನುವು ಮಾಡುವಂತೆ ಕೋರಲಾಗಿದೆ.

5. ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಕೊಳ್ಳೇಗಾಲ – ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲ ರೀತಿಯ ವಾಹನಗಳನ್ನು ಬೆ೦ಗಳೂರು - ಚನ್ನಪಟ್ಟಣ - ಹಲಗೂರು - ಮಳವಳ್ಳಿ - ಕೊಳ್ಳೇಗಾಲ-ಮಹದೇಶ್ವರಬೆಟ್ಟ ಮಾರ್ಗವಾಗಿ ಸ೦ಚರಿಸಲು ಅನುವು ಮಾಡುವಂತೆ ಕೋರಲಾಗಿದೆ. ಆದೇಶ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಯನ್ನು ಮಂಡ್ಯ ಡಿಸಿ ನೀಡಿದ್ದಾರೆ.

ಹೆದ್ದಾರಿಗೆ ಸಂಬಂಧಿಸಿದ ಕಾಮಗಾರಿಗಳ ದಾಖಲೆ ನಾಳೆ ಬಿಡುಗಡೆ : ಕೆಪಿಸಿಸಿ ಮಾಧ್ಯಮ ವಕ್ತಾರ ಎಂ ಲಕ್ಷ್ಮಣ್ : ಇನ್ನೊಂದೆಡೆ ಬೆಂಗಳೂರು- ಮೈಸೂರು ನಡುವಿನ ಹೆದ್ದಾರಿಯನ್ನು ಸಿದ್ದರಾಮಯ್ಯ ಹಾಗೂ ಮಹದೇವಪ್ಪ ವೀಕ್ಷಣೆ ಮಾಡಲಿದ್ದಾರೆ. ಅದೇ ಸಮಯದಲ್ಲಿ ಮಾಧ್ಯಮಗಳಿಗೆ ಈ ಹೆದ್ದಾರಿ ಕಾಮಗಾರಿ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಎಂ. ಲಕ್ಷ್ಮಣ್ ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ತಿಂಗಳ 12ರಂದು ಬೆಂಗಳೂರು - ಮೈಸೂರು ಹೆದ್ದಾರಿ ಕಾಮಗಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ನಾಳೆ ಸಿದ್ದರಾಮಯ್ಯ, ಈ ಹೈವೇ ಕಾಮಗಾರಿ ಪರಿಶೀಲನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

9,360 ಕೋಟಿ ರೂ. ಹಣ ಖರ್ಚು : ಈ ಹೈವೇ ಕಾಮಗಾರಿಗೆ ಹಿಂದಿನ ಕಾಂಗ್ರೆಸ್ ಸರ್ಕಾರ ನಯಾ ಪೈಸೆ ನೀಡಿಲ್ಲ. ಈ ಕಾಮಗಾರಿಗೆ ಕೇಂದ್ರ ಸರ್ಕಾರ 9,360 ಕೋಟಿ ಹಣ ಖರ್ಚು ಮಾಡಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಬಗ್ಗೆ ನಾಳೆ ಸಿದ್ದರಾಮಯ್ಯ, ಮಾಜಿ ಸಚಿವ ಮಹಾದೇವಪ್ಪ ಅವರೊಂದಿಗೆ, ಕಾಮಗಾರಿ ವೀಕ್ಷಣೆ ಮಾಡಿ, ಈ ಕಾಮಗಾರಿಗೆ ಕಾಂಗ್ರೆಸ್ ಕೊಡುಗೆ ಏನು? ಈ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ದಾಖಲೆಗಳನ್ನು ಬಿಡುಗಡೆಗೂ ಮುನ್ನ, ಪರಿಶೀಲನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ : ಬೆಂಗಳೂರು-ಮೈಸೂರು ಹೆದ್ದಾರಿಗೆ ಸಂಬಂಧಿಸಿದ ಕಾಮಗಾರಿಗಳ ದಾಖಲೆ ನಾಳೆ ಬಿಡುಗಡೆ: ಕೆಪಿಸಿಸಿ ಮಾಧ್ಯಮ ವಕ್ತಾರ ಎಂ.ಲಕ್ಷ್ಮಣ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.