ಮಂಡ್ಯ: ಜಿಲ್ಲೆಯ ಅಕ್ಕಿಹೆಬ್ಬಾಳು ಗ್ರಾಮದ ಬಳಿ ಕಾಲುವೆಯಲ್ಲಿ ಈಜಲು ಹೋಗಿದ್ದ ಪುದುಚೇರಿಯ ರಾಷ್ಟ್ರ ಮಟ್ಟದ ಸೈಕಲ್ ಪೋಲೋ ಆಟಗಾರರೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.
ಮೃತ ಬಾಲಕನನ್ನು ಅಲ್ಹರ್ಷ್ (17) ಎಂದು ಗುರುತಿಸಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೈಸೂರು ವಿಶ್ವವಿದ್ಯಾಲಯ ಹಾಸ್ಟೆಲ್ ಮೈದಾನದಲ್ಲಿ ಇದೇ 17 ರಿಂದ 20 ವರೆಗೆ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಸೈಕಲ್ ಪೋಲೋ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ಇಲ್ಲಿಗೆ ಬಂದ ತಂಡದಲ್ಲಿ ಈತ ಕೂಡಾ ಒಬ್ಬರು.
ಅಲ್ಹರ್ಷ್ ಹತ್ತಿರದ ಕಾಲುವೆಗೆ ಈಜಲು ಹೋಗಿದ್ದು, ದುರದೃಷ್ಟವಶಾತ್ ನೀರಿನಲ್ಲಿ ಮುಳುಗಿದ್ದಾರೆ. ಸಾವಿಗೆ ನಿಖರವಾದ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಮತ್ತು ಅಗ್ನಿ ಶಾಮಕ ದಳ ಸಿಬ್ಬಂದಿ ಬಾಲಕನ ಮೃತದೇಹವನ್ನು ಕಾಲುವೆಯಿಂದ ಹೊರತೆಗೆದಿದ್ದಾರೆ.
ಇದನ್ನೂ ಓದಿ: ಹೊಂಡಕ್ಕೆ ಬಿದ್ದು ಐವರು ವಿದ್ಯಾರ್ಥಿಗಳು ಓರ್ವ ಶಿಕ್ಷಕ ಸಾವು!