ಮಂಡ್ಯ: ಕೊರೊನಾಗೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಚೇಗೌಡ ಮಾಹಿತಿ ನೀಡಿದ್ದಾರೆ.
ಮದ್ದೂರಿನಲ್ಲಿ ವಾಸವಿದ್ದ 55 ವರ್ಷದ ವ್ಯಕ್ತಿ ಮೃತ ಪಟ್ಟಿದ್ದಾರೆ. ಮೃತ ವ್ಯಕ್ತಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಕೋವಿಡ್ 19 ಮಾರ್ಗಸೂಚಿ ಪ್ರಕಾರ ಅಂತ್ಯಕ್ರಿಯೆ ಮಾಡಲಾಗುವುದು. ಸ್ವಯಂ ಆಗಿ ಕೆಲಸ ಮಾಡಲು ಕೆಲವರು ಮುಂದೆ ಬಂದಿದ್ದಾರೆ. ಟೀಂ ಸಿದ್ಧತೆ ಮಾಡಿಕೊಂಡಿದ್ದಾರೆ. ಜಿಲ್ಲಾಡಳಿತದಿಂದ ಜಾಗ ಗುರುತಿಸಲಾಗಿದೆ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಡ್ಯ ತಾಲೂಕಿನ ಯತ್ತದಹಳ್ಳಿ ಗ್ರಾಮದಲ್ಲಿ 8 ಎಕರೆ ಭೂಮಿ ಗುರ್ತಿಸಲಾಗಿದೆ. ಆ ಜಾಗದಲ್ಲಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಸಲಾಗಿದೆ. ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮದೊಂದಿಗೆ ಅಂತ್ಯಕ್ರಿಯೆ ಮಾಡಲಾಗುವುದು ಎಂದು ತಿಳಿಸಿದರು.