ಮಂಡ್ಯ: ಕಾವೇರಿ ತೀರದಲ್ಲಿ ಹೊಸ ವರ್ಷಾಚರಣೆಗೆ ಶ್ರೀರಂಗಪಟ್ಟಣ ತಾಲೂಕು ಆಡಳಿತ ಕಡಿವಾಣ ಹಾಕಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಶ್ರೀರಂಗಪಟ್ಟಣ ತಹಶೀಲ್ದಾರ್, ಡಿಸೆಂಬರ್ 31ರ ಬೆಳಗ್ಗೆ 6 ಗಂಟೆಯಿಂದ 2020ರ ಜನವರಿ 1ರ ಸಂಜೆ 6 ಗಂಟೆಯವರೆಗೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ ಸೇರಿದಂತೆ ಕಾವೇರಿ ತೀರದ ಸುತ್ತಮುತ್ತಲ ಪ್ರದೇಶಗಳಲ್ಲಿ ಸಿಆರ್‌ಪಿಸಿ ಸೆಕ್ಷನ್ 144ರ ಅನ್ವಯ ನಿಷೇಧ ಹೇರಿದ್ದಾರೆ.
ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಐದಕ್ಕಿಂತ ಹೆಚ್ಚು ಜನರು ಸಂಚಾರ ಮಾಡುವುದು ಮತ್ತು ಕಾವೇರಿ ನದಿಗೆ ಇಳಿದು ಮೋಜು ಮಸ್ತಿ ಮಾಡುವುದನ್ನು ನಿಷೇಧಿಸಲಾಗಿದೆ.