ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಚಂದ್ರೆ ಗ್ರಾಮದ 30 ಅಡಿ ಆಳದ ಪಾಳುಬಾವಿಯಲ್ಲಿ ನವಜಾತ ಗಂಡು ಶಿಶು ಪತ್ತೆಯಾಗಿದೆ. ಅಳುತ್ತಿದ್ದ ಮಗುವಿನ ಶಬ್ದ ಕೇಳಿ ದಾರಿಹೋಕರು ಮಗುವನ್ನು ರಕ್ಷಿಸಿ ತಕ್ಷಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸ್ಥಳೀಯರ ಮಾಹಿತಿ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ನವಜಾತ ಶಿಶುವನ್ನು ರಕ್ಷಣೆ ಮಾಡಿದ್ದಾರೆ. ಪಾಂಡವಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮಿಮ್ಸ್ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿದೆ.
ಇದನ್ನೂ ಓದಿ: ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆ; ತಮಗೇ ಮಗು ಕೊಡಿ ಎಂದು ಹಲವರ ದುಂಬಾಲು
ಕಸದಿಂದ ತುಂಬಿದ್ದ ಪಾಳುಬಾವಿಯಲ್ಲಿ ಬಿದ್ದಿದ್ದರೂ ಪವಾಡ ಸದೃಶ್ಯ ರೀತಿಯಲ್ಲಿ ಶಿಶು ಬದುಕುಳಿದಿದೆ. ಶಿಶುವಿನ ಮುಖ ಮತ್ತು ದೇಹದ ಕೆಲವು ಭಾಗಗಳಿಗೆ ಇರುವೆ ಕಚ್ಚಿರುವ ಗುರುತುಗಳಿದ್ದು, ನಿರ್ದಯಿ ತಾಯಿಯ ಕೃತ್ಯಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ. ಈ ಕುರಿತು ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪೊದೆಯಿಂದ ಕೇಳಿಸಿತು ನವಜಾತ ಮಗುವಿನ ಕೂಗು.. ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ ಸ್ಥಳೀಯರು