ಮಂಡ್ಯ: ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಪುಟ್ಟರಾಜು ಜೊತೆಗೂಡಿ ಪ್ರಚಾರ ಮಾಡುತ್ತಿದ್ದಾರೆ.
ಪಾಂಡವಪುರ ತಾಲೂಕಿನ ಕಟ್ಟೇರಿ, ಅರಳುಕುಪ್ಪೆ ಭಾಗದಲ್ಲಿ ರೋಡ್ ಶೋ ಮಾಡುತ್ತಿದ್ದು, ಅಭಿಮಾನಿಗಳು ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಅಭಿನಂದಿಸಿದರು. ಪುಷ್ಪವೃಷ್ಠಿ ಮೂಲಕ ಸ್ವಾಗತಿಸಿದ ಜೆಡಿಎಸ್ ಕಾರ್ಯಕರ್ತರು, ಜೈಕಾರ ಹಾಕಿ ಘೋಷಣೆ ಕೂಗಿದರು.
ಶಾಸಕರ ಪ್ರಚಾರ:
ನಿಖಿಲ್ ಮೇಲುಕೋಟೆ ವ್ಯಾಪ್ತಿಯಲ್ಲಿ ಪ್ರಚಾರ ಮಾಡುತ್ತಿದ್ದರೆ, ಅತ್ತ ಮಂಡ್ಯದಲ್ಲಿ ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಶಾಸಕರು ಸೇರಿದಂತೆ ಸ್ಥಳೀಯ ಮುಖಂಡರು ಪ್ರಚಾರದಲ್ಲಿ ತೊಡಗಿದ್ದಾರೆ.