ETV Bharat / state

ಸಕ್ಕರೆ ನಾಡಲ್ಲಿ ಇನ್ನೂ ಶಮನವಾಗದ ಕೈ- ಜೆಡಿಎಸ್ ಮುಖಂಡರ ಮುನಿಸು: ಜಿಟಿಡಿ ಬೇಸರ - ಅಬ್ಬರದ ಪ್ರಚಾರ

ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಚುನಾವಣಾ ಪ್ರಚಾರ ಜೋರಾಗಿದೆ. ಇವರಿಗೆ ಸಚಿವ ಜಿ.ಟಿ. ದೇವೇಗೌಡ, ಶಾಸಕ ಅನ್ನದಾನಿ, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಸಾಥ್​ ನೀಡಿದ್ದಾರೆ.

ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ
author img

By

Published : Apr 2, 2019, 4:40 PM IST

ಮಂಡ್ಯ: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಜಿ.ಟಿ. ದೇವೇಗೌಡ, ಶಾಸಕ ಅನ್ನದಾನಿ, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಜೊತೆ ಸೇರಿ ಪ್ರಚಾರ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಚುನಾವಣಾ ಪ್ರಚಾರ

ಪ್ರಚಾರ ಸಭೆಯಲ್ಲಿ ಮಾತನಾಡಿದ ಸಚಿವ ಜಿ.ಟಿ. ದೇವೇಗೌಡ, ಈಗ ಎಲ್ಲವೂ ಮೀರಿ‌ ಹೋಗಿದೆ ಅನ್ನೋ ಮೂಲಕ ಮೈತ್ರಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ. ನಿಖಿಲ್ ಪರ ಪ್ರಚಾರ ಮಾಡಲು ಸಾಧ್ಯವಿಲ್ಲವೆಂದು ಮಾಜಿ ಸಚಿವ ಚಲುವರಾಯಸ್ವಾಮಿಯೇ ಹೇಳಿದ್ದಾರೆ. ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ಮುಖಂಡರು ಯಾರೂ ನಮ್ಮ ಪರ ಕೆಲಸ ಮಾಡುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಎಂಟು ಜನ ಕಾಂಗ್ರೆಸ್ ಮುಖಂಡರು ನಮಗೆ ಬೆಂಬಲ ನೀಡುತ್ತಿಲ್ಲ. ನೂರಕ್ಕೆ ನೂರು ಸತ್ಯ. ಎಂಟಕ್ಕೆ ಎಂಟು ಕ್ಷೇತ್ರದಲ್ಲಿ ಕಳೆದ ವಿಧಾನಸಭೆ ಚುನಾವಣೆಗಳಲ್ಲಿ ಸೋತ ಕಾಂಗ್ರೆಸ್ ಮುಖಂಡರು ಸುಮಲತಾ ಪರ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರು ಸ್ಪರ್ಧಿಸಿರುವ ಕಡೆ ಜೆಡಿಎಸ್‌ನವರ ಅಸಮಾಧಾನ ಇಲ್ಲ ಎಂದರು.

ಜೆಡಿಎಸ್‌ನವರು ನಿಂತಿರುವ ಕಡೆ ಅಸಮಾಧಾನ ಇದೆ. ಅದನ್ನು ಗಮನಕ್ಕೆ ತಂದಿದ್ದೇವೆ. ಮಂಡ್ಯದಲ್ಲಿ ನಾನು ಸೇರಿದಂತೆ ಎಲ್ಲರೂ ಕಾಂಗ್ರೆಸ್‌ನವರ ಜೊತೆ ಒಟ್ಟಿಗೆ ಹೋಗುವ ಪ್ರಯತ್ನ ಮಾಡಿದ್ದೇವೆ. ಚಲುವರಾಯಸ್ವಾಮಿ ಜೊತೆಯೂ ಮಾತನಾಡಿದೆ. ಆದರೆ ಕುಮಾರಣ್ಣ ನಮ್ಮ ವಿರುದ್ಧ ಮಾತನಾಡುತ್ತಾರೆ. ನಾವು ಯಾರೂ ನಿಮ್ಮ ಪರ ಕೆಲಸ ಮಾಡಲು ಸಾಧ್ಯವಿಲ್ಲ ಅಂತಾ ಹೇಳಿದ್ದಾರೆ ಎಂದರು.

Intro:ಮಂಡ್ಯ: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಜಿ.ಟಿ. ದೇವೇಗೌಡ, ಶಾಸಕ ಅನ್ನದಾನಿ, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಜೊತೆ ಸೇರಿ ಪ್ರಚಾರ ಮಾಡುತ್ತಿದ್ದಾರೆ.Body:ಪ್ರಚಾರ ಸಭೆಯಲ್ಲಿ ಮಾತನಾಡಿರುವ ಸಚಿವ ಜಿ.ಟಿ.ದೇವೇಗೌಡ, ಎಲ್ಲವೂ ಮೀರಿ‌ ಹೋಗಿದೆ ಅನ್ನೋ ಮೂಲಕ ಮೈತ್ರಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ.
ನಿಖಿಲ್ ಪರ ಪ್ರಚಾರ ಮಾಡಲು ಸಾಧ್ಯವಿಲ್ಲ ಎಂದು ಚಲುವರಾಯಸ್ವಾಮಿಯೇ ಹೇಳಿದ್ದಾರೆ. ಮಾಜಿ ಸಚಿವರಾದ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ಮುಖಂಡರು ಯಾರೂ ನಮ್ಮ ಪರ ಕೆಲಸ ಮಾಡುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಎಂಟು ಜನ ಕಾಂಗ್ರೆಸ್ ಮುಖಂಡರು ನಮಗೆ ಸಪೋರ್ಟ್ ಮಾಡುತ್ತಿಲ್ಲ. ನೂರಕ್ಕೆ ನೂರು ಸತ್ಯ. ಎಂಟಕ್ಕೆ ಎಂಟು ಕ್ಷೇತ್ರದಲ್ಲಿ ಕಳೆದ ವಿಧಾನಸಭೆ ಚುನಾವಣೆಗಳಲ್ಲಿ ಸೋತ ಕಾಂಗ್ರೆಸ್ ಮುಖಂಡರು ಸುಮಲತಾ ಪರ ಕೆಲಸ ಮಾಡ್ತಿದ್ದಾರೆ. ಕಾಂಗ್ರೆಸ್‌ನವರು ಸ್ಪರ್ಧೆ ಮಾಡಿರುವ ಕಡೆ ಜೆಡಿಎಸ್‌ನವರ ಅಸಮಾಧಾನ ಇಲ್ಲ ಎಂದರು.
ಆದರೆ ಜೆಡಿಎಸ್‌ನವರು ನಿಂತಿರುವ ಕಡೆ ಅಸಮಾಧಾನ ಇದೆ. ಅದನ್ನು ಗಮನಕ್ಕೆ ತಂದಿದ್ದೇವೆ. ಮಂಡ್ಯದಲ್ಲಿ ನಾನು ಸೇರಿದಂತೆ ಎಲ್ಲರೂ ಕಾಂಗ್ರೆಸ್‌ನವರ ಜೊತೆ ಒಟ್ಟಿಗೆ ಹೋಗುವ ಪ್ರಯತ್ನ ಮಾಡಿದ್ದೇವೆ. ಚಲುವರಾಯಸ್ವಾಮಿ ಜೊತೆಯೂ ಮಾತನಾಡಿದೆ. ಆದರೆ ಕುಮಾರಣ್ಣ ನಮ್ಮ ವಿರುದ್ದ ಮಾತನಾಡುತ್ತಾರೆ. ಎಲ್ಲವೂ ಮೀರಿ ಹೋಗಿದೆ‌. ನಾವು ಯಾರು ನಿಮ್ಮ ಪರ ಕೆಲಸ ಮಾಡಲು ಸಾಧ್ಯವಿಲ್ಲ‌ ಎಂದು ಹೇಳಿದ್ದಾರೆ ಎಂದರು.
ಕೊತ್ತತ್ತಿ ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.