ಮಂಡ್ಯ: ನಿಖಿಲ್ ಕುಮಾರಸ್ವಾಮಿ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮದ್ದೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಸುಮಾರು 30 ರಿಂದ 40 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಲು ನಿಖಿಲ್ ಕುಮಾರಸ್ವಾಮಿ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ಕನ್ನಂಬಾಡಿ ಜಲಾಶಯದ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ವಿಚಾರವಾಗಿ ಮಾತನಾಡಿದ ಅವರು, ಕನ್ನಂಬಾಡಿ ಜಲಾಶಯ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಬೇಕಾ ಬೇಡವಾ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಟ್ರಯಲ್ ಬ್ಲಾಸ್ಟ್ ನಡೆಸೋದನ್ನು ಸರ್ಕಾರ ನಿಲ್ಲಿಸಿದೆ. ಅಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂಬುದು ನನಗೆ ಗೊತ್ತಿಲ್ಲ.
ಟ್ರಯಲ್ ಬ್ಲಾಸ್ಟ್ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದರು. ಇನ್ನು ಜಲಾಶಯಕ್ಕೆ ಧಕ್ಕೆ ಆಗುವ ಆತಂಕದಲ್ಲಿ ರೈತರು ಪ್ರತಿಭಟನೆ ಮಾಡಿದ್ದಾರೆ. ಪರಿಸ್ಥಿತಿ, ವಾಸ್ತವಾಂಶ ತಿಳಿದುಕೊಂಡು ಸರ್ಕಾರ ಟ್ರಯಲ್ ಬ್ಲಾಸ್ಟ್ ಬಗ್ಗೆ ತೀರ್ಮಾನ ಮಾಡಬೇಕು ಎಂದು ಹೇಳಿದರು. ಒಕ್ಕಲಿಗ ಸಿಎಂ ವಿಚಾರವಾಗಿ ಮಾತನಾಡಿದ ಅವರು, ಒಕ್ಕಲಿಗರ ನಾಯಕ ಯಾರು ಎಂದು ಜನ ತೀರ್ಮಾನ ಮಾಡುತ್ತಾರೆ, ಹೊರತು ಕಾಂಗ್ರೆಸ್ ಮುಖಂಡರಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಓದಿ : ಸಿನಿಮಾ, ಶ್ವಾನ, ಕ್ರಿಕೆಟ್.. ಸಿಂಪಲ್ ಸಿಎಂ ರಾಜಕೀಯೇತರ ಬದುಕಿನ ಸುತ್ತ ಒಂದು ರೌಂಡ್ಸ್ !