ETV Bharat / state

ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧಿಸಲ್ಲ : ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ - ನಿಖಿಲ್ ಕುಮಾರಸ್ವಾಮಿ

ನಿಖಿಲ್​ ಕುಮಾರಸ್ವಾಮಿ 5 ವರ್ಷಗಳ ಕಾಲ ರಾಜಕೀಯಕ್ಕೆ ಬರುವುದು ಬೇಡ ಎಂದು ಹೇಳಿರುವುದಾಗಿ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ
ಮಾಜಿ ಸಿಎಂ ಕುಮಾರಸ್ವಾಮಿ
author img

By ETV Bharat Karnataka Team

Published : Aug 28, 2023, 7:53 PM IST

Updated : Aug 28, 2023, 9:24 PM IST

ಹೆಚ್​ ಡಿ ಕುಮಾರಸ್ವಾಮಿ ಹೇಳಿಕೆ

ಮಂಡ್ಯ: ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ನಿಖಿಲ್‌ಗೆ ಸಲಹೆ ನೀಡಿದ್ದೇನೆ, ರಾಜಕೀಯ ಸಹವಾಸಕ್ಕೆ ಹೋಗಬೇಡ. ನಿನಗೆ ಭಗವಂತ ಕೊಟ್ಟಿರೋ ಕಲೆ ಇದೆ ಸಿನಿಮಾ ಮಾಡು ಎಂದು ಹೇಳಿರುವುದಾಗಿ ನಿಖಿಲ್ ಚುನಾವಣೆ ಸ್ಪರ್ಧೆ ಬಗ್ಗೆ ನಿಖಿಲ್​ ತಂದೆಯೂ ಆಗಿರುವ ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಅವರು, ನಿಖಿಲ್​ಗೆ ರಾಜಕೀಯ ಜಂಗುಳಿ ಬಿಟ್ಟು ಕಲಾವಿದನಾಗಿ ಬದುಕು ರೂಪಿಸಿಕೊಳ್ಳಲು ಹೇಳಿದ್ದೇನೆ. ಚುನಾವಣೆಗೆ ನಿಲ್ಲುವ ಪ್ರಶ್ನೆಯೇ ಇಲ್ಲ. ಈಗಾಗಲೇ ಮೂರು ಚಿತ್ರಗಳನ್ನು ನಿರ್ಮಾಣ ಮಾಡಲು ಕೆಲವರು ಮುಂದೆ ಬಂದಿದ್ದಾರೆ. ಸಿನಿಮಾದತ್ತ ನಿಖಿಲ್ ಮತ್ತೆ ಮುಖ ಮಾಡಿದ್ದಾನೆ. ಚುನಾವಣೆಯಲ್ಲಿ ಎರಡು ಬಾರಿ‌ ಸೋತಿದ್ದಾನೆ. ಮಂಡ್ಯ ಸಂಸದ ಚುನಾವಣೆ ಸ್ಪರ್ಧೆಗೂ ಬೇಡಾ ಅಂದಿದ್ದೆ. ನಿಖಿಲ್ ಮಂಡ್ಯದಲ್ಲಿ ನಿಲ್ಲಲು ಸಿದ್ಧನಿರಲಿಲ್ಲ. ಶಾಸಕರು ಹಾಗೂ ಕಾರ್ಯಕರ್ತರ ಒತ್ತಡದಿಂದ ಚುನಾವಣೆಗೆ ಸ್ಪರ್ಧಿಸಿದ್ದ. ಸೋಲು-ಗೆಲುವು ಇರುತ್ತೆ, ಅದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ.

ದೇವೇಗೌಡರು, ನಾನು ಎಲ್ಲರೂ ಸೋತಿದ್ದೇವೆ. ನಾನು ಒತ್ತಡಗಳ ಮೇಲೆ ಚುನಾವಣೆ ಮಾಡಲ್ಲ. ಸದ್ಯಕ್ಕೆ ನಿಖಿಲ್‌ಗೆ ರಾಜಕೀಯ ಬೇಡಾ ಅಂತಾ ಹೇಳಿದ್ದೇನೆ. ಮುಂದೆ ನೋಡೋಣಾ, ಅವನ ಹಣೆಯಲ್ಲಿ ಬರೆದಿದ್ರೆ ನಾನು ತಪ್ಪಿಸೋಕೆ‌ ಆಗಲ್ಲ. ಸದ್ಯದ ಪರಿಸ್ಥಿತಿಯಲ್ಲಿ ನಿನ್ನ ಜೀವನ ರೂಪಿಸಿಕೋ ಎಂದು ಹೇಳಿರುವೆ. ಯಾವುದೇ ಕಾರಣಕ್ಕೂ ಮುಂದಿನ ಐದು ವರ್ಷ ಚುನಾವಣೆಗೆ ತರಲ್ಲ. ನಿಖಿಲ್ ಕುತಂತ್ರಕ್ಕೆ ಬಲಿಯಾಗಿದ್ದಾನೆ. ಇದೀಗ ಅದೇ ಜನ ಪಶ್ಚಾತ್ತಾಪ ಪಡುವಂತೆ ಆಗಿದೆ ಎಂದು ಹೆಚ್​ಡಿಕೆ ಹೇಳಿದರು.

ಮಂಡ್ಯ ಜಿಲ್ಲೆಯಲ್ಲಿ ಆಪರೇಷನ್​ ಹಸ್ತ ನಡೆಯುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಪ್ರಸ್ತುತ ಸನ್ನಿವೇಶದಲ್ಲಿ ರಾಜ್ಯದಲ್ಲಿ ಪಕ್ಷನಿಷ್ಠೆ ಯಾರಲ್ಲೂ ಉಳಿದಿಲ್ಲ. ವೈಯಕ್ತಿಕ ಸ್ಥಾನಮಾನಕ್ಕಾಗಿ ಪಕ್ಷಾಂತರ ಮಾಡುತ್ತಾರೆ. ಹಾಗಾಗಿ, ಆ ವಿಚಾರಗಳಿಗೆ ನಾನು ಮಹತ್ವ ಕೊಡಲ್ಲ, ತಲೆ ಕೆಡಿಸಿಕೊಳ್ಳಲ್ಲ. ಮಂಡ್ಯದಲ್ಲಿ ಕೆಲವರು ಹೋಗುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅವರನ್ನೇ ಕೇಳಬೇಕು, ನಾನು ಯಾರ ಮೇಲೂ ಅನುಮಾನ ಪಡಲ್ಲ. ಪುಟ್ಟರಾಜು ಸದ್ಯ ನಮ್ಮ ಪಕ್ಷದಲ್ಲಿದ್ದಾರೆ. ಶ್ರೀರಂಗಪಟ್ಟಣದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ನನ್ನ ವಿರುದ್ಧ ಅಪಾದನೆ ಮಾಡುತ್ತಾರೆ. ಅವರ ಕುಟುಂಬಕ್ಕೆ ದೇವೇಗೌಡರ ಕುಟುಂಬ ಬೆಂಬಲವಾಗಿ ನಿಂತಿತ್ತು. ಇವರನ್ನ ಶಾಸಕರನ್ನಾಗಿ ಮಾಡಲು ಪ್ರತಿನಿತ್ಯ ಮುಂಜಾನೆ ಹಳ್ಳಿ ಹಳ್ಳಿ ಸುತ್ತಿ ಪ್ರಚಾರ ಮಾಡಿದ್ದೇನೆ. ಅಂಬರೀಶ್ ವಿರುದ್ಧ ಇವರನ್ನು ಗೆಲ್ಲಿಸಿಕೊಂಡು ಬಂದಿದ್ದೆ. ಈಗ ಅವರು ನನಗೆ ಉಪದೇಶ ಮಾಡುತ್ತಾರೆ, ಇವರ ಪಾಪದ ಕೊಡ ತುಂಬಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಈಗಿನ ಸರ್ಕಾರದ ವರ್ಗಾವಣೆಗೂ, ನನ್ನ ಕಾಲದ ವರ್ಗಾವಣೆಗೂ ವ್ಯತ್ಯಾಸ ಇದೆ. 2018ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಬಿಡಿಎ ಕಮಿಷನರ್ ಆಗಲು 15 ಕೋಟಿ ರೂ. ಕೊಡಲು ಬಂದರು. ನನಗೆ 15 ಕೋಟಿ ರೂ. ಕೊಡುವ ಅಧಿಕಾರಿ ಬಿಡಿಎಗೆ ಏನು ಕೆಲಸ ಮಾಡಲು ಸಾಧ್ಯ ಬೇಡ ಎಂದು ಹೇಳಿ ಕಳುಹಿಸಿದ್ದೆ. ನನ್ನ ಸರ್ಕಾರ ತೆಗೆದು ಬಿಜೆಪಿ ಬಂದ ಬಳಿಕ ಅದೇ ಅಧಿಕಾರಿಗೆ ಅದೇ ಹುದ್ದೆ ಕೊಟ್ಟರು. ಈಗಲೂ ನಾನು ಯಾವುದಕ್ಕೂ ಅಂಜಲ್ಲ. ಇದಕ್ಕಿಂತ ಕಷ್ಟದ ದಿನಗಳನ್ನು ನೋಡಿದ್ದೇನೆ. ಮೊದಲು ರೈತರ ಕಷ್ಟಗಳನ್ನು ಪರಿಹರಿಸಿ. 134 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ ಎಂದಿದ್ದೀರಿ. ರೈತರಿಗೆ ಬರ ಪರಿಹಾರ ಸಿಗಲ್ಲ. ಬರದ ಹೆಸರಲ್ಲೂ ದುಡ್ಡು ಹೊಡೆಯುವ ಕಾರ್ಯಕ್ರಮ ಆರಂಭವಾಗುತ್ತದೆ. ಅದು ಆಗದ ರೀತಿ ಎಚ್ಚರಿಕೆ ವಹಿಸಿ ಕೆಲಸ ಮಾಡಿ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಕಾವೇರಿ ವಿಚಾರದಲ್ಲಿ ಸರ್ಕಾರ ಹುಡುಗಾಟಿಕೆ ಬಿಡಬೇಕು. ನಿಮ್ಮ ಗ್ಯಾರಂಟಿ ಜೊತೆಗೆ ರೈತರಿಗೆ 6ನೇ ಗ್ಯಾರಂಟಿ ಕೊಡಿ. ರೈತರಿಗೆ ಪರಿಹಾರ ಕೊಡ್ತೇವೆ ಅಂತ ಘೋಷಣೆ ಮಾಡಿ ಎಂದರು. ಬಳಿಕ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಿಲ್ಲ. ವಾಟರ್ ಮ್ಯಾನೇಜ್‌ಮೆಂಟ್‌ ಬೋರ್ಡ್ ನವರು ನೀರು ಬಿಡಿ ಅಂದ ತಕ್ಷಣ ಸರ್ಕಾರ ಬಿಡುಗಡೆ ಮಾಡಿದೆ. ಆಗಲೇ ಪ್ರತಿಭಟನೆ ಮಾಡಬೇಕಿತ್ತು. ತಮಿಳುನಾಡಿನವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದ್ದಾರೆ. ಅರ್ಜಿ ವಿರುದ್ಧ ಸುಪ್ರೀಂ ಕೋರ್ಟ್ ಮುಂದೆ ನಮ್ಮ ರಾಜ್ಯ ಸರ್ಕಾರ ಹೋಗಬೇಕಿತ್ತು ಎಂದು ಹೇಳಿದರು.

ಇದನ್ನೂ ಓದಿ: ಜೆಡಿಎಸ್​ನ ಎಲ್ಲಾ ಶಾಸಕರು ಪಕ್ಷ ನಿಷ್ಠೆ ಉಳ್ಳವರು.. ಯಾರೂ ಪಕ್ಷ ಬಿಡಲ್ಲ: ಸಿ ಎಂ ಇಬ್ರಾಹಿಂ

Last Updated : Aug 28, 2023, 9:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.